ಶಾಸಕ ಸ್ಥಾನ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ನಂತರ ಬಿಜೆಪಿ ಸೇರ್ಪಡೆಗೊಂಡು ತಮ್ಮ ಸ್ವಕ್ಷೇತ್ರ ನಂಜನಗೂಡಿನಿಂದ ಉಪ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದರು.

ಬೆಂಗಳೂರು(ಮೇ.02): ರಾಜ್ಯ ಬಿಜೆಪಿ ರಾಜ್ಯ ಉಪಾಧ್ಯಕ್ಷರನ್ನಾಗಿ ವಿ. ಶ್ರೀನಿವಾಸ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ಶಾಸಕ ಸ್ಥಾನ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ನಂತರ ಬಿಜೆಪಿ ಸೇರ್ಪಡೆಗೊಂಡು ತಮ್ಮ ಸ್ವಕ್ಷೇತ್ರ ನಂಜನಗೂಡಿನಿಂದ ಉಪ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದರು. ತದನಂತರ ತಾವು ಚುನಾವಣೆಯಿಂದ ದೂರವುಳಿಯುವುದಾಗಿ ತಿಳಿಸಿದ್ದರು.