ಶ್ರೀನಿವಾಸ ಪ್ರಸಾದ್'ರನ್ನು ಸೆಳೆಯಲು ಬಿಜೆಪಿ ಮತ್ತು ಜೆಡಿಎಸ್ನಲ್ಲಿ ಪೈಪೋಟಿ ನಡೆದಿದ್ದರೆ, ಪಕ್ಷದಲ್ಲೇ ಉಳಿಸಿಕೊಳ್ಳುವ ಯತ್ನ ಕಾಂಗ್ರೆಸ್'ನಿಂದಲೂ ನಡೆದಿದೆ.
ಬೆಂಗಳೂರು(ಅ. 17): ಸಿಎಂ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ವಿಧಾನಸಭೆ ಸ್ಪೀಕರ್ ಕೋಳಿವಾಡ ಅವರನ್ನು ಭೇಟಿ ಮಾಡಿದ ಶ್ರೀನಿವಾಸಪ್ರಸಾದ್, ತಮ್ಮ ಶಾಸಕ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.
ಶ್ರೀನಿವಾಸ ಪ್ರಸಾದ್'ರನ್ನು ಸೆಳೆಯಲು ಬಿಜೆಪಿ ಮತ್ತು ಜೆಡಿಎಸ್ನಲ್ಲಿ ಪೈಪೋಟಿ ನಡೆದಿದ್ದರೆ, ಪಕ್ಷದಲ್ಲೇ ಉಳಿಸಿಕೊಳ್ಳುವ ಯತ್ನ ಕಾಂಗ್ರೆಸ್'ನಿಂದಲೂ ನಡೆದಿದೆ. ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಈಗಾಗಲೇ ಎರಡು ಬಾರಿ ಶ್ರೀನಿವಾಸ ಪ್ರಸಾದ್ ಅವರನ್ನು ಸಂಪರ್ಕಿಸಿದ್ದು, ಪಕ್ಷಕ್ಕೆ ಕರೆತರುವ ಪ್ರಯತ್ನ ನಡೆಸಲಾಗಿದೆ ಎಂದಿದ್ದಾರೆ. ಇನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಕೂಡಾ ಶ್ರಿನಿವಾಸ್ ಪ್ರಸಾದ್'ರನ್ನ ಪಕ್ಷಕ್ಕೆ ಸೆಳೆಯುವ ಪ್ರಯತ್ನವನ್ನು ಖಚಿತಪಡಿಸಿದ್ದಾರೆ.
