ನವದೆಹಲಿ(ಆ.16): ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಗಂಭಿರವಾಗಿದೆ. ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿರುವ ವಾಜಪೇಯಿ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ವಾಜಪೇಯಿ ಕಳೆದ ಎರಡು ತಿಂಗಳಿನಿಂದ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಅಜಾತಶತ್ರು ಅವರ ಆರೋಗ್ಯದ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ. 

ಆಸ್ಪತ್ರೆಗೆ ರಾಹುಲ್ ಗಾಂಧಿ ದೌಡು: ಏಮ್ಸ್ ಆಸ್ಪತ್ರೆಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೌಡಾಯಿಸಿದ್ದಾರೆ.

ಪ್ರಧಾನಿ ಮೋದಿ ಭೇಟಿ: ಪ್ರಧಾನಿ ನರೇಂದ್ರ ಮೋದಿ ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದು, ವಾಜಪೇಯಿ ಆರೋಗ್ಯ ವಿಚಾರಿಸಿದ್ದಾರೆ.

ಮನಮೋಹನ್ ಸಿಂಗ್ ಭೇಟಿ: ದೆಹಲಿಯ ಏಮ್ಸ್ ಆಸ್ಪತ್ರೆಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡ ಭೇಟಿ ನೀಡಿದ್ದು, ವಾಜಪೇಯಿ ಆರೋಗ್ಯ ವಿಚಾರಿಸಿದರು.

ಗುಲಾಂ ನಬಿ ಆಜಾದ್ ಭೇಟಿ: ದೆಹಲಿಯ ಏಮ್ಸ್ ಆಸ್ಪತ್ರೆಗೆ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಭೇಟಿ ನೀಡಿ ವಾಜಪೇಯಿ ಆರೋಗ್ಯ ವಿಚಾರಿಸಿದರು.

ಸರ್ಕಾರಿ ಕಾರ್ಯಕ್ರಮಗಳಿಗೆ ಬ್ರೇಕ್: ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳಲ್ಲಿ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ.

ಕೇಜ್ರಿ ಹುಟ್ಟುಹಬ್ಬಕ್ಕೆ ಬ್ರೇಕ್: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಬಿಗಡಾಯಿಸಿದ ಹಿನ್ನೆಲೆಯಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಹುಟ್ಟುಹಬ್ಬ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.

ಅಮಿತ್ ಶಾ ಕಾರ್ಯಕ್ರಮ ರದ್ದು: ಮಧ್ಯಪ್ರದೇಶದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಹಾಜರಾಗಬೇಕಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ವಾಜಪೇಯಿ ಆರೋಗ್ಯ ಬಿಗಡಾಯಿಸಿದ ಹಿನ್ನೆಲೆಯಲ್ಲಿ ತಮ್ಮ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ. ಅಲ್ಲದೇ ಮಧ್ಯಪ್ರದೇಶ ಬಿಜೆಪಿ ಘಟಕ ಕೂಡ ಕಾರ್ಯಕಾರಿಣಿ ಸಭೆಯನ್ನು ರದ್ದುಗೊಳಿಸಿದೆ.

ದರ್ಗಾದಲ್ಲಿ ವಿಶೇಷ ಪ್ರಾರ್ಥನೆ: ಇನ್ನು ಅಟಲ್ ತವರೂರು ಗ್ವಾಲಿಯರ್‌ನಲ್ಲಿ ತಮ್ಮ ನೆಚ್ಚಿನ ನಾಯಕನ ಆರೋಗ್ಯಕ್ಕಾಗಿ ವಿಶೇಷ ಪ್ರಾರ್ಥನೆಗಳನ್ನು ನಡೆಸಲಾಗುತ್ತಿದೆ. ಇಲ್ಲಿನ ದರ್ಗಾದಲ್ಲಿ ಮಕ್ಕಳು ವಿಶೇಷ ಪ್ರಾರ್ತನೆ ಮಾಡುವ ಮೂಲಕ ವಾಜಪೇಯಿ ಆರೋಗ್ಯ ಸುಧಾರಣೆಗೆ ಪ್ರಾರ್ಥಿಸಿದರು.

ಏಮ್ಸ್ ರಸ್ತೆ ಬಂದ್: ಏಮ್ಸ್ ಆಸ್ಪತ್ರೆ ರಸ್ತೆಯನ್ನು ಸಾರ್ವಜನಿಕರಿಗೆ ಮುಚ್ಚಲಾಗಿದ್ದು, ಯಾವುದೇ ಕಾರಣಕ್ಕೂ ಏಮ್ಸ್ ಆಸ್ಪತ್ರೆ ಬಳಿ ಬರದಂತೆ ವಾಹನ ಸವಾರರಿಗೆ ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರ ಸಿಎಂ ದೆಹಲಿಗೆ: ಇನ್ನು ವಾಜಪೇಯಿ ಆರೋಗ್ಯ ಬಿಗಡಾಯಿಸುತ್ತಿದ್ದಂಯೆಯೇ ಮಹಾರಾಷ್ಟ್ರ ಸಿಎಂ ದೆವೇಂದ್ರ ಫಡ್ನವೀಸ್ ದೆಹಲಿಗೆ ಹೊರಟು ನಿಂತಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆ ವೇಳೆ ಫಡ್ನವೀಸ್ ದೆಹಲಿ ತಲುಪಲಿದ್ದಾರೆ.

ಹೈದರಾಬಾದ್‌ನಲ್ಲಿ ಯಾಗ: ಅಟಲ್ ಆರೋಗ್ಯ ಸುಧಾರಿಸಲಿ ಎಂದು ಹೈದರಾಬಾದ್‌ನಲ್ಲಿ ಬಿಜೆಪಿ ಶಾಸಕರಿಂದ ಯಾಗ ನಡೆಸಲಾಗುತ್ತಿದೆ. ಬಿಹಜೆಪಿ ಶಾಸಕ ರಾಜಾ ಸಿಂಗ್ ನೇತೃತ್ವದಲ್ಲಿ ಯಾಗ ಆಯೋಜನೆ.

ಓಮರ್ ಅಬ್ದುಲ್ಲಾ ಭೇಟಿ: ದೆಹಲಿಯ ಏಮ್ಸ್ ಆಸ್ಪತ್ರೆಗೆ ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಓಮರ್ ಅಬ್ದುಲ್ಲಾ ಭೆಟಿ ನೀಡಿ ವಾಹಪೇಯಿ ಆರೋಗ್ಯ ವಿಚರಿಸಿದರು.

ವಾಜಪೇಯಿಗೆ ಪ್ರಾರ್ಥಿಸುತ್ತಿದೆ ಇಡೀ ದೇಶ: ಮಾಜಿ ಪ್ರಧಾನಿ ವಾಜಪೇಯಿ ಆರೋಗ್ಯ ಬಿಗಡಾಯಿಸುತ್ತಿದ್ದಂತೆಯೇ ಇಡೀ ದೇಶ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣಲೆಂದು ಪ್ರಾರ್ಥಿಸುತ್ತಿದೆ.

ಕುಟುಂಬಸ್ಥರಿಗೆ ಬುಲಾವ್: ಈಗಾಗಲೇ ವಾಜಪೇಯುಇ ಕುಟುಂಬಸ್ಥರು ಆಸ್ಪತ್ರೆ ತಲುಪಿದ್ದು, ಗ್ವಾಲಿಯರ್ ಮತ್ತು ಆಗ್ರಾದಲ್ಲಿರುವ ವಾಜಪೇಯಿ ಸಂಬಂಧಿಕರಿಗೂ ಬುಲಾವ್ ನೀಡಲಾಗಿದೆ.

ಆಸ್ಪತ್ರೆಗೆ ಬಿಗಿ ಭದ್ರತೆ: ಇನ್ನು ವಾಜಪೇಯಿ ಆರೋಗ್ಯ ಬಿಗಡಾಯಿಸುತ್ತಿದ್ದಂತೇ ಆಸ್ಪತ್ರೆಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದ್ದು, ಭದ್ರತಾ ತುಕಡಿಗಳು ಇಡೀ ಆಸ್ಪತ್ರೆಯನ್ನು ಸುತ್ತುವರೆದಿವೆ.

ಆಸ್ಪತ್ರೆಗೆ ಗಣ್ಯರ ಭೇಟಿ: ಮಾಜಿ ಪ್ರಧಾನಿ ಆರೋಗ್ಯ ಸ್ಥಿತಿ ಗಂಭೀರವಾಗುತ್ತಿದ್ದಂತೇ ಏಮ್ಸ್ ಆಸ್ಪತ್ರೆಗೆ ಗಣ್ಯರು ಭೇಟಿ ನೀಡುತ್ತಿದ್ದಾರೆ. ಪ್ರಮುಖವಾಗಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ. ಅಡ್ವಾಣಿ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿದಂತೆ ಅನೇಕ ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಏಮ್ಸ್ ವೈದ್ಯರ ಸುದ್ದಿಗೋಷ್ಠಿ: ಇನ್ನು ಕೆಲವೇ ಕ್ಷಣಗಳಲ್ಲಿ ಏಮ್ಸ್ ವೈದ್ಯರು ಸುದ್ದಿಗೋಷ್ಠಿ ನಡೆಸಲಿದ್ದು, ಇದಕ್ಕೂ ಮುನ್ನ ವಾಜಪೇಯಿ ಆರೋಗ್ಯದ ಕುರಿತಾದ ಮಾಹಿತಿಯನ್ನು ಪ್ರಧಾನಿ ಕಾರ್ಯಾಲಯಕ್ಕೆ ರವಾನಿಸಲಿದ್ದಾರೆ.