ಜೈಪುರ  : ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯ ಭರದಿಂದ ಸಾಗಿದೆ.  ಇತ್ತ ರಾಜಸ್ಥಾನ ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿ ಇಬ್ಬರೂ ಕೂಡ ಒಂದೇ ವಿಮಾನದಲ್ಲಿ ಪ್ರಯಾಣಿಸಿ ಸುದ್ದಿಯಾಗಿದ್ದಾರೆ. 

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಾಗೂ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಬುಧವಾರ ಒಂದೇ ವಿಮಾನದಲ್ಲಿ ಪ್ರಯಾಣ ಮಾಡಿದ್ದು, ಆದರೂ ಇಬ್ಬರ ನಡುವೆ ಯಾವುದೇ ಮಾತುಕತೆ ನಡೆದಿಲ್ಲ. 

ಜೈಪುರದಿಂದ ಹಾಲಿ ಸಿಎಂ ಕಾಂಗ್ರೆಸ್ ನಾಯಕ ಗೆಹ್ಲೋಟ್ ಹಾಗೂ ಬಿಜೆಪಿ ನಾಯಕಿ ವಸುಂಧರಾ ರಾಜೇ ದಿಲ್ಲಿಗೆ ಪ್ರಯಾಣಿಸಿದ್ದಾರೆ. 

ಇನ್ನು ಈ ಬಗ್ಗೆ ಮಾತನಾಡಿದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರಾಜೇ ಬ್ಯುಸಿನೆಸ್ ಕ್ಲಾಸ್ ನಲ್ಲಿ ಪ್ರಯಾಣಿಸಿದ್ದು, ತಾವು ಎಕಾನಮಿ ಕ್ಲಾಸ್ ನಲ್ಲಿ ಪ್ರಯಾಣ ಮಾಡಿದ್ದು, ಅವರ ಪ್ರಯಾಣದ ಬಗ್ಗೆ ತಮಗೆ ಯಾವುದೇ ಮಾಹಿತಿ ಇರಲಿಲ್ಲ. ಈ ನಿಟ್ಟಿನಲ್ಲಿ ನಮ್ಮ ನಡುವೆ ಯಾವುದೇ ಮಾತುಕತೆಯಾಗಿಲ್ಲ ಎಂದು  ಹೇಳಿದರು. ಅಲ್ಲದೇ ಇದೇ ವೇಳೆ ಮತದಾನಕ್ಕೆ ಬಳಕೆಯಾದ ಇವಿಎಂ ಬಗ್ಗೆಯೂ ಅಸಮಾಧಾನ ಹೊರಹಾಕಿದರು. 

ಇವಿಎಂ ದೋಷದಿಂದ ಕೂಡಿದ್ದು, ಈ ಬಗ್ಗೆ ಕೋರ್ಟ್ ಕ್ರಮ ಕೈಗೊಳ್ಳಬಹುದಾದ ನಂಬಿಕೆ ಇದೆ. ಅಮೆರಿಕಾ, ಇಂಗ್ಲೆಂಡ್ ನಂತ ದೇಶಗಳಲ್ಲಿಯೂ ಕೂಡ ಇವಿಎಂ ಬಳಕೆ ಮಾಡುತ್ತಿಲ್ಲ ನಮ್ಮ ದೇಶದಲ್ಲಿ ಯಾಕೆ ಎಂದು ಪ್ರಶ್ನೆ ಮಾಡಿದರು.