ಈ ಕುರಿತು ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾಹಿತಿ ನೀಡಿದ ಕನ್ನಡ ಚಳವಳಿ ಪಕ್ಷದ ನಾಯಕ ವಾಟಾಳ್‌ ನಾಗರಾಜ್‌, ಹೊಗೇನಕಲ್‌ ನೀರಿನ ವಿಚಾರವಾಗಿ ತಮಿಳು ಚಿತ್ರರಂಗ ನಡೆಸುತ್ತಿದ್ದ ಪ್ರತಿಭಟನಾ ಸಮಾವೇಶದಲ್ಲಿ ನಟ ಸತ್ಯರಾಜು ಅವರು ಕರ್ನಾಟಕ ರಾಜ್ಯ ಹಾಗೂ ಕನ್ನಡಪರ ಹೋರಾಟಗಾರರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಇದು ರಾಜ್ಯಕ್ಕೆ ಮಾಡಿದ ಅವಮಾನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು: ಕರ್ನಾಟಕ ಹಾಗೂ ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ತಮಿಳುನಾಡಿನ ನಟ ಸತ್ಯರಾಜು ಅವರ ನಡೆಯನ್ನು ಕನ್ನಡಪರ ಸಂಘಟನೆಗಳು ಖಂಡಿಸಿದ್ದು, ಅವರು ನಟಿಸಿರುವ ಬಹುನಿರೀಕ್ಷೆಯ ಬಾಹುಬಲಿ-2 ಚಲನಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆ ಮಾಡುವುದನ್ನು ವಿರೋಧಿಸಿ ಏ.28ರಂದು ಶುಕ್ರವಾರ ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾಹಿತಿ ನೀಡಿದ ಕನ್ನಡ ಚಳವಳಿ ಪಕ್ಷದ ನಾಯಕ ವಾಟಾಳ್‌ ನಾಗರಾಜ್‌, ಹೊಗೇನಕಲ್‌ ನೀರಿನ ವಿಚಾರವಾಗಿ ತಮಿಳು ಚಿತ್ರರಂಗ ನಡೆಸುತ್ತಿದ್ದ ಪ್ರತಿಭಟನಾ ಸಮಾವೇಶದಲ್ಲಿ ನಟ ಸತ್ಯರಾಜು ಅವರು ಕರ್ನಾಟಕ ರಾಜ್ಯ ಹಾಗೂ ಕನ್ನಡಪರ ಹೋರಾಟಗಾರರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಇದು ರಾಜ್ಯಕ್ಕೆ ಮಾಡಿದ ಅವಮಾನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಳೆದ ಮೂರು ವರ್ಷದಿಂದ ಬರ ಆವರಿಸಿ ಜನತೆ ಪರಿತಪಿಸುತ್ತಿದ್ದಾರೆ. ಇತ್ತ ಕುಡಿಯುವ ನೀರಿಗೂ ಸಂಕಷ್ಟಎದುರಾಗಿದ್ದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟಿನ ಆದೇಶದಂತೆ ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಬಿಡುಗಡೆ ಮಾಡಿದೆ. ಎಂತಹ ಸಂದಿಗ್ಧ ಸಂದರ್ಭಗಳಲ್ಲೂ ಕನ್ನಡಿಗರು ತಾಳ್ಮೆಯಿಂದ ವರ್ತಿಸಿ ಮಾನವೀಯತೆ ಮೆರೆದಿದ್ದಾರೆ. ಆದರೆ, ನಟ ಸತ್ಯರಾಜು ಎಂಬುವವರು ಕರ್ನಾಟಕ ಹಾಗೂ ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಸರಿಯಲ್ಲ ಎಂದು ಹೇಳಿದರು.