ಏಪ್ರಿಲ್ 12ರಂದು ಕರ್ನಾಟಕ ಬಂದ್

First Published 5, Apr 2018, 1:37 PM IST
Vatal Nagaraj calls for Karnataka bandh on April 12
Highlights

ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿರೋಧಿಸಿ ವಾಟಾಳ್ ನಾಗರಾಜ್ ಅವರು ಕರ್ನಾಟಕ ಬಂದ್’ಗೆ ಕರೆ ನೀಡಿದ್ದಾರೆ.

ಬೆಂಗಳೂರು : ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿರೋಧಿಸಿ ವಾಟಾಳ್ ನಾಗರಾಜ್ ಅವರು ಕರ್ನಾಟಕ ಬಂದ್’ಗೆ ಕರೆ ನೀಡಿದ್ದಾರೆ.

ಏಪ್ರಿಲ್ 12 ರಂದು ಕರ್ನಾಟಕ ಬಂದ್’ಗೆ ಕರೆ ನೀಡಿದ್ದಾರೆ.  ಇನ್ನುಮುಂದೆ ಕರ್ನಾಟಕದಲ್ಲಿ ರಜನಿಕಾಂತ್ ಹಾಗೂ ಕಮಲ್ ಹಾಸನ್ ಚಿತ್ರಗಳ ಬಿಡುಗಡೆಗೆ ಅವಕಾಶ ನೀಡುವುದಿಲ್ಲ. ಕಾವೇರಿ ನಿರ್ವಹಣಾ ಮಂಡಳಿ ಪರವಾಗಿ ನಿಂತಿರುವ ರಜನಿಕಾಂತ್ ಹಾಗೂ ಕಮಲ್ ಹಾಸನ್ ಅವರಿಗೆ ಇನ್ನುಮುಂದೆ ಕರ್ನಾಟಕ ಪ್ರವೇಶಕ್ಕೆ ಅವಕಾಶ ಕೊಡುವುದಿಲ್ಲ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.

ಕಾವೇರಿ ನಿರ್ಹಹಣಾ ಮಂಡಳಿ ರಚನೆಗೆ ಕೇಂದ್ರ ಸರ್ಕಾರ ಮುಂದಾಗಬಾರದು. ರಚನೆಗೆ ಅವಕಾಶ ಕೊಟ್ಟರೆ ಕನ್ನಡಿಗರಿಂದ ಭಾರೀ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ. ಇನ್ನು ಈ ಬಂದ್’ಗೆ ಸಾರಾ ಗೋವಿಂದು ಹಾಗೂ ಮಂಜುನಾಥ ದೇವ ಇತರೆ ಕನ್ನಡಪರ  ನಾಯಕರೂ ಸಹ  ಬೆಂಬಲ ನೀಡಲಿದ್ದಾರೆ.

loader