ಇನ್ನೆರಡು ಡಿಸಿಎಂ ಸ್ಥಾನಕ್ಕಾಗಿ ವಾಟಾಳ್‌ ಧರಣಿ

Vatal Nagaraj Protest  Today
Highlights

ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟದಲ್ಲಿ ಉತ್ತರ ಕರ್ನಾಟಕ ಮತ್ತು ಹೈದರಾಬಾದ್‌- ಕರ್ನಾಟಕ ಪ್ರದೇಶಕ್ಕೆ ತಲಾ ಒಂದು ಉಪ ಮುಖ್ಯಮಂತ್ರಿ ನೀಡಬೇಕು ಎಂದು ಒತ್ತಾಯಿಸಿ ಕನ್ನಡ ಒಕ್ಕೂಟವು ಭಾನುವಾರ (ಮೇ 27) ಬೆಳಗ್ಗೆ 11 ಗಂಟೆಗೆ ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಿದೆ.

ಬೆಂಗಳೂರು :  ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟದಲ್ಲಿ ಉತ್ತರ ಕರ್ನಾಟಕ ಮತ್ತು ಹೈದರಾಬಾದ್‌- ಕರ್ನಾಟಕ ಪ್ರದೇಶಕ್ಕೆ ತಲಾ ಒಂದು ಉಪ ಮುಖ್ಯಮಂತ್ರಿ ನೀಡಬೇಕು ಎಂದು ಒತ್ತಾಯಿಸಿ ಕನ್ನಡ ಒಕ್ಕೂಟವು ಭಾನುವಾರ (ಮೇ 27) ಬೆಳಗ್ಗೆ 11 ಗಂಟೆಗೆ ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌, ಕರ್ನಾಟಕ ಏಕೀಕರಣವಾದ ಅಂದಿನಿಂದಲೂ ಉತ್ತರ ಕರ್ನಾಟಕ ಮತ್ತು ಹೈದರಾಬಾದ್‌- ಕರ್ನಾಟಕ ಪ್ರದೇಶವನ್ನು ಕಡೆಗಣಿಸುತ್ತಲೇ ಬರಲಾಗುತ್ತಿದೆ. ನೂತನ ಸರ್ಕಾರದಲ್ಲಿಯೂ ಕಡೆಗಣಿಸಲಾಗಿದೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಎರಡೂ ಹುದ್ದೆಗಳನ್ನು ದಕ್ಷಿಣ ಕರ್ನಾಟಕ ಪ್ರದೇಶಗಳಿಗೇ ನೀಡಲಾಗಿದೆ ಎಂದು ತಿಳಿಸಿದರು.

ಹೈ-ಕ ಅಭಿವೃದ್ಧಿಗಾಗಿ ನಂಜುಂಡಪ್ಪ ವರದಿ, 371(ಜೆ) ವಿಶೇಷ ಸ್ಥಾನಮಾನ ನೀಡಿದ್ದರೂ ಯಾವುದೇ ರೀತಿಯಲ್ಲಿ ಪ್ರಗತಿ ಕಾಣುತ್ತಿಲ್ಲ. ರಾಜಕೀಯವಾಗಿ ಸ್ಥಾನಮಾನ ನೀಡುವುದರಿಂದ ಅಭಿವೃದ್ಧಿಯಾಗಲು ಸಾಧ್ಯವಿದೆ ಎಂದು ಹೇಳಿದರು.

loader