ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಕೊಡುಗೆ ಏನು ಇಲ್ಲ

ನೆಲಮಂಗಲ(ಸೆ.03): ಮುಂದಿನ 20 ವರ್ಷಗಳು ರಾಜ್ಯದಲ್ಲಿ ಮತ್ತೆ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ವೀರಪ್ಪ ಮೊಯ್ಲಿ ಭವಿಷ್ಯ ನುಡಿದಿದ್ದಾರೆ.

ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ಮಾಜಿ ಸಚಿವ ಶಂಕರ್ ನಾಯಕ್ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಉಚಿತ ಆರೋಗ್ಯ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಕೊಡುಗೆ ಏನು ಇಲ್ಲ, ರಾಜ್ಯ ಸರ್ಕಾರದ ಮೇಲೆ ಮಲತಾಯಿ ಧೋರಣೆ ತೋರುವ ಮೂಲಕ ರೈತರ ಸಾಲ ಮನ್ನ ಮಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದರು. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಉತ್ತಮ ಆಡಳಿತ ನಡೆಸುತ್ತಿದ್ದು, ತೀವ್ರ ಬರಗಾಲದಲ್ಲಿ ರೈತರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಿದೆ ಎಂದರು.