, ವಿರೋಧ ಪಕ್ಷದ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ 244 ಮತ ಪಡೆದು ಸೋಲನ್ನು ಅನುಭವಿಸಿದ್ದಾರೆ.

ನವದೆಹಲಿ(ಆ.05): ದೇಶದ 13ನೇ ಉಪರಾಷ್ಟ್ರಪತಿಯಾಗಿ ಬಿಜೆಪಿಯ ಹಿರಿಯ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ವೆಂಕಯ್ಯನಾಯ್ಡು ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಆಡಳಿತ ಪಕ್ಷದ ವೆಂಕಯ್ಯನಾಯ್ಡು ಅವರು 516 ಮತ ಪಡೆದರೆ, ವಿರೋಧ ಪಕ್ಷದ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ 244 ಮತ ಪಡೆದು ಸೋಲನ್ನು ಅನುಭವಿಸಿದ್ದಾರೆ.

ಆಂಧ್ರಪ್ರದೇಶ ಮೂಲದ ವೆಂಕಯ್ಯ ನಾಯ್ಡು ವಿದ್ಯಾರ್ಥಿ ಜೀವನದಿಂದಲೇ ಬಿಜೆಪಿಯಲ್ಲಿ ಗುರುತಿಸಿಕೊಂಡು ಶಾಸಕ, ಸಂಸದ ಹಾಗೂ ಕೇಂದ್ರ ಸಚಿವ ಸೇರಿದಂತೆ ಹಲವು ಹುದ್ದೆಗಳನ್ನು ನಿರ್ವಹಿಸಿದ್ದರು. ರಾಜ್ಯಸಭೆಯ ಸದಸ್ಯರಾಗಿ 3 ಬಾರಿ ಕರ್ನಾಟಕದಿಂದ ಪ್ರತಿನಿಧಿಸಿದ್ದರು. ಶೇಕಡವಾರು ಮತಗಳಲ್ಲಿ ವೆಂಯ್ಯ ಅವರು ಶೇ.68 ಹಾಗೂ ಗೋಪಾಲಕೃಷ್ಣ ಗಾಂಧಿ ಶೇ.32 ಮತ ಪಡೆದಿದ್ದಾರೆ. ಹಾಲಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅಸರ ಅವಧಿ ಇದೇ ತಿಂಗಳು ಮುಕ್ತಾಯಗೊಳ್ಳಲಿದೆ.