ಕನ್ನಡದ ಹಿರಿಯ ನಟಿ ಜಯಂತಿ ಆರೋಗ್ಯದಲ್ಲಿ ಏರುಪೇರಾಗಿದ್ದು ಇಂದು ಬೆಳಿಗ್ಗೆ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಂಗಳೂರು (ಮಾ. 26): ಕನ್ನಡದ ಹಿರಿಯ ನಟಿ ಜಯಂತಿ ಆರೋಗ್ಯದಲ್ಲಿ ಏರುಪೇರಾಗಿದ್ದು ಇಂದು ಬೆಳಿಗ್ಗೆ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಜಯಂತಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನನ್ನ ತಾಯಿಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಗಾಬರಿಯಾಗುವ ಅಗತ್ಯ ಎಲ್ಲ ಎಂದು ಪುತ್ರ ಕೃಷ್ಣಕುಮಾರ್ ಹೇಳಿದ್ದಾರೆ.
