Asianet Suvarna News Asianet Suvarna News

ಹಿರಿಯ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು

ಹಿರಿಯ ಕಾಂಗ್ರೆಸ್ ನಾಯಕ ಹಾಗು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

Veteran Congress Leader Kagodu Thimmappa Hospitalized in Shivamogga
Author
Bengaluru, First Published Jul 5, 2019, 12:42 PM IST
  • Facebook
  • Twitter
  • Whatsapp

ಶಿವಮೊಗ್ಗ [ಜು.05]: ಮಾಜಿ ಸಚಿವ ಹಾಗೂ ಹಿರಿಯ  ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಸಾಗರದಲ್ಲಿದ್ದ ಕಾಗೋಡು ತಿಮ್ಮಪ್ಪ ಅವರಿಗೆ ದಿಢೀರ್ ಅನಾರೋಗ್ಯ ಎದುರಾದ ಹಿನ್ನೆಲೆ ಸಾಗರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯದಲ್ಲಿ ನಿಧಾನವಾಗಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ಹೇಳಿದ್ದಾರೆ.

Follow Us:
Download App:
  • android
  • ios