52 ವರ್ಷಗಳಲ್ಲಿ ಮೊದಲ ಬಾರಿ ವಿಎಚ್‌ಪಿ ಅಂತಾರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

First Published 11, Apr 2018, 8:33 AM IST
VHPs First Election in 52 Years
Highlights

ವಿಶ್ವ ಹಿಂದೂ ಪರಿಷತ್‌ನ ಅಂತಾರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ಏರ್ಪಟ್ಟಿದ್ದು, 52 ವರ್ಷಗಳ ವಿಎಚ್‌ಪಿ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ.

ನವದೆಹಲಿ: ವಿಶ್ವ ಹಿಂದೂ ಪರಿಷತ್‌ನ ಅಂತಾರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ಏರ್ಪಟ್ಟಿದ್ದು, 52 ವರ್ಷಗಳ ವಿಎಚ್‌ಪಿ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ.

ಅಧ್ಯಕ್ಷ ಸ್ಥಾನದ ಇಬ್ಬರು ಆಕಾಂಕ್ಷಿಗಳಾದ ವಿಎಚ್‌ಪಿಯ ಹಾಲಿ ಅಂತಾರಾಷ್ಟ್ರೀಯ ಅಧ್ಯಕ್ಷ ಹೈದರಾಬಾದ್‌ ಮೂಲದ ರಾಘವರೆಡ್ಡಿ ಮತ್ತು ಹಿಮಾಚಲ ಪ್ರದೇಶದ ಮಾಜಿ ಗವರ್ನರ್‌ ಮತ್ತು ಮಧ್ಯಪ್ರದೇಶ ಹೈಕೋರ್ಟ್‌ನ ನ್ಯಾಯಾಧೀಶ ವಿಷ್ಣು ಸದಾಶಿವ ಕೊಕಜೆ ನಡುವೆ ತೀವ್ರ ಪೈಪೋಟಿ ಇದೆ.

ಈ ಹಿನ್ನೆಲೆಯಲ್ಲಿ ಈ ಇಬ್ಬರ ಪೈಕಿ ಯಾರನ್ನು ಅಧ್ಯಕ್ಷ ಹುದ್ದೆಗೆ ಆಯ್ಕೆ ಮಾಡಬೇಕು ಎಂಬುದನ್ನು ನಿರ್ಧರಿಸುವಲ್ಲಿ ವಿಎಚ್‌ಪಿ ಸದಸ್ಯರು ವಿಫಲವಾಗಿದ್ದಾರೆ. ಹೀಗಾಗಿ ಗುಡಗಾಂವ್‌ನಲ್ಲಿ ಏ.14ರಂದು ಚುನಾವಣೆ ನಿಗದಿಯಾಗಿದೆ.

 

loader