ಚೆನ್ನೈ[ಸೆ.24] ನಿತ್ಯಾನಂದ ಸ್ವಾಮಿಯನ್ನು ತಮಿಳು ಹಿರಿತೆರೆ ಮತ್ತು ಕಿರುತೆರೆ ನಟಿ ಪ್ರಿಯಾ ಭವಾನಿ ಶಂಕರ್ ಟ್ರೋಲ್ ಮಾಡಿದ್ದಾರೆ. ನಿತ್ಯಾನಂದ ಹಾವ ಭಾವಗಳನ್ನು ಅನುಕರಣೆ ಮಾಡುತ್ತ ಕುಳಿತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಮೊದಲು ನ್ಯೂಸ್ ಆ್ಯಂಕರ್ ಆಗಿ ಗುರುತಿಸಿಕೊಂಡಿದ್ದ ಪ್ರಿಯಾ ನಂತರ ಬಣ್ಣದ ಲೋಕಕ್ಕೆ ಕಾಲಿರಿಸಿದರು. ಇನ್‌ ಸ್ಟ್ರಾಗ್ರಾಮ್ ನಲ್ಲಿ ಹಂಚಿಕೊಂಡಿದ್ದ ವಿಡಿಯೋ ವನ್ನು ಒಂದೇ ದಿನಕ್ಕೆ 2.2 ಲಕ್ಷ ಮಂದಿ ವೀಕ್ಷಣೆ ಮಾಡಿದ್ದಾರೆ.

ನಿತ್ಯಾನಂದ ಸ್ವಾಮಿ ಅತ್ಯಾಚಾರದ ಪ್ರಕರಣ ಎದುರಿಸುತ್ತಿದ್ದಾರೆ. ಈ ಹಿಂದೆ ನಟಿ ರಂಜಿತಾ ಜತೆಗೆ ರಾಸಲೀಲೆಯಲ್ಲಿ ತೊಡಗಿದ್ದ ವಿಡಿಯೋ ಮಾಧ್ಯಮಗಳಲ್ಲಿ ಸುದ್ದಿ ಮಾಡಿ ನಿತ್ಯಾನಂದನನ್ನು ಸಂಕಷ್ಟಕ್ಕೆ ಸಿಲುಕಿಸಿತ್ತು.