ವಿವಾದಾತ್ಮಕ ನಾಯಕನ ಜಯಂತಿ ಬೇಕಾ?
ಟಿಪ್ಪು ಜಯಂತಿ ಆಚರಣೆ ಕುರಿತ ಸಾಧಕ-ಬಾಧಕಗಳ ಕುರಿತು ವಿಧಾನಸೌಧದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಜಯಮಾಲೆ ನೇತೃತ್ವದಲ್ಲಿ ಸಭೆ ಮುಕ್ತಾಯ. ಅಂತಿಮವಾಗಿ ಸಭೆಯಲ್ಲಿ ಕೈಗೊಂಡ ನಿರ್ಧಾರವೇನು? ಇಲ್ಲಿದೆ ವಿವರ.
ಬೆಂಗಳೂರು(ನ.6): ಈಗಾಗಲೇ ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ಸಂಬಂಧ ಸಾಕಷ್ಟು ಪರ-ವಿರೋಧಗಳು ವ್ಯಕ್ತವಾಗುತ್ತಿವೆ.ಕಳೆದ ವರ್ಷ ಟಿಪ್ಪು ಜಯಂತಿ ಆಚರಣೆ ವೇಳೆ ನಡೆದ ಹಿತಕರ ಘಟನೆಗಳಿಂದಾಗಿ ಈ ಬಾರಿ ಟಿಪ್ಪು ಜಯಂತಿ ಆಚರಣೆ ಮಾಡಬೇಕೋ, ಬೇಡವೋ ಎನ್ನುವ ಚರ್ಚೆಗಳು ನಡೆದಿವೆ. ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಣೆಗೆ ನಿರ್ಧಾರಿಸಲಾಗಿದ್ದು, ಕಾರ್ಯಕ್ರಮದಲ್ಲಿ ಎಲ್ಲಾ ಸಚಿವರು ಭಾಗಿ ಆಗುತ್ತಾರೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..