ಮಲ್ಯ ಆಸ್ಪತ್ರೆಯಿಂದ ವಿದ್ವತ್ ಬಿಡುಗಡೆ

First Published 5, Mar 2018, 10:20 AM IST
Vidwath Discharge From Hospital
Highlights

ರಾಜ್ಯಾದ್ಯಂತ ಸುದ್ದಿಗೆ ಗ್ರಾಸವಾಗಿದ್ದ ಶಾಸಕ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಹಾಗೂ ಸಹಚರರಿಂದ ಹಲ್ಲೆಗೊಳಗಾಗಿ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉದ್ಯಮಿ ಲೋಕನಾಥನ್ ಅವರ ಪುತ್ರ ವಿದ್ವತ್ ಆಸ್ಪತ್ರೆಯಿಂದ ಭಾನುವಾರ ತಡರಾತ್ರಿ ಬಿಡುಗಡೆಯಾಗಿದ್ದಾರೆ.

ಬೆಂಗಳೂರು : ರಾಜ್ಯಾದ್ಯಂತ ಸುದ್ದಿಗೆ ಗ್ರಾಸವಾಗಿದ್ದ ಶಾಸಕ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಹಾಗೂ ಸಹಚರರಿಂದ ಹಲ್ಲೆಗೊಳಗಾಗಿ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉದ್ಯಮಿ ಲೋಕನಾಥನ್ ಅವರ ಪುತ್ರ ವಿದ್ವತ್ ಆಸ್ಪತ್ರೆಯಿಂದ ಭಾನುವಾರ ತಡರಾತ್ರಿ ಬಿಡುಗಡೆಯಾಗಿದ್ದಾರೆ.

ಕಳೆದ 17 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ವತ್ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎನ್ನಲಾಗಿದೆ.  ಆಸ್ಪತ್ರೆಯ ದಾಖಲೆಗಳ ಪ್ರಕಾರ ಫೆ.3ರಂದೇ (ಶನಿವಾರ) ಬಿಡುಗಡೆ ಮಾಡಲಾಗಿದೆ. ವೈದ್ಯಕೀಯ ಚಿಕಿತ್ಸಾ ವೆಚ್ಚ ಭರಿಸಲು ವಿಮೆ ಪ್ರಕ್ರಿಯೆ ತಡವಾದ ಕಾರಣ ಭಾನುವಾರ ನಾಲ್ಕು ಗಂಟೆ ಸುಮಾರಿಗೆ ಪ್ರಕ್ರಿಯೆ ಪೂರ್ಣಗೊಂಡಿದೆ. ಸದ್ಯ ವಿದ್ವತ್’ನನ್ನು ಸಂಬಂಧಿಕರ ಮನೆಯಲ್ಲಿ ಇರಿಸಲಾಗಿದೆ.

ಮನೆಯಲ್ಲಿ ಬರುವ ಹೋಗಗುವವರ ಸಂಖ್ಯೆ ಹೆಚ್ಚಿರುವ ಕಾರಣ ಸೂಕ್ತ ವಿಶ್ರಾಂತಿ ಸಾಧ್ಯವಾಗುವುದಿಲ್ಲವೆಂದು ಅಲ್ಲಿರಿಸಲಾಗಿದೆ ಎಂದು ವಿದ್ವತ್ ತಂದೆ ಲೋಕನಾಥ್ ತಿಳಿಸಿದ್ದಾರೆ.

loader