ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿಜಯ ಪತಾಕೆ ಹಾರಿಸಿದೆ. ವಿಜಯ್  ರೂಪಾನಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಅಧಿಕಾರದ ಗದ್ದುಗೆ ಹಿಡಿದಿದ್ದಾರೆ. ಉಪ ಮುಖ್ಯಮಂತ್ರಿಯಾಗಿ ನಿತಿನ್ ಪಟೇಲ್ ನೇಮಕವಾಗಿದ್ದಾರೆ.

ಗುಜರಾತ್ (ಡಿ.22):ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿಜಯ ಪತಾಕೆ ಹಾರಿಸಿದೆ. ವಿಜಯ್ರೂಪಾನಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಅಧಿಕಾರದ ಗದ್ದುಗೆ ಹಿಡಿದಿದ್ದಾರೆ. ಉಪ ಮುಖ್ಯಮಂತ್ರಿಯಾಗಿ ನಿತಿನ್ ಪಟೇಲ್ ನೇಮಕವಾಗಿದ್ದಾರೆ.

ಗಾಂಧಿನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ವಿಜಯ ರೂಪಾನಿಯನ್ನು ಮುಖ್ಯಮಂತ್ರಿಯಾಗಿ, ನಿತಿನ್ ಪಟೇಲ್’ರನ್ನು ಉಪ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.

ಗುಜರಾತ್’ನ ಒಟ್ಟು 182 ಸ್ಥಾನಗಳಲ್ಲಿ ಬಿಜೆಪಿ 99 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ 77 ಸ್ಥಾನಗಳನ್ನು ಗೆದ್ದಿದೆ. ಎನ್'ಸಿಪಿ 1 ಸ್ಥಾನವನ್ನು ಗೆದ್ದಿದ್ದರೆ, ಬಿಟಿಪಿ 2 ಹಾಗೂಇತರೆ 3 ಸ್ಥಾನಗಳನ್ನು ಗೆದ್ದಿದೆ.