ಮತ್ತೆ ವಿಜಯ್ ರೂಪಾನಿ ಅವರೇ ಮತ್ತೊಮ್ಮೆ ಗುಜರಾತ್ ಚುಕ್ಕಾಣಿ ಹಿಡಿಯಲಿದ್ದಾರೆ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ ರೂಪಾನಿಗೆ ಬಿಜೆಪಿ ಮುಖ್ಯಮಂತ್ರಿ ಪಟ್ಟವನ್ನು ನೀಡುತ್ತಿದೆ ಎನ್ನುವ ಮಾತುಗಳು ಕೇಳಿ ಬಂದಿದೆ.
ಗಾಂಧಿನಗರ (ಡಿ.22): ಗುಜರಾತ್ ಚುನಾವಣೆ ನಡೆದು ಫಲಿತಾಂಶವೂ ಪ್ರಕಟವಾಗಿ, ಬಿಜೆಪಿಯು ವಿಜಯಿಯಾಗಿದೆ. ಇದಾದ ಬಳಿಕ ಇಲ್ಲಿ ಯಾರು ಮುಖ್ಯಮಂತ್ರಿಯಾಗಲಿದ್ದಾರೆ ಎನ್ನುವ ಕುತೂಹಲವು ಮನೆ ಮಾಡಿತ್ತು.
ಇದೀಗ ಮತ್ತೆ ವಿಜಯ್ ರೂಪಾನಿ ಅವರೇ ಮತ್ತೊಮ್ಮೆ ಗುಜರಾತ್ ಚುಕ್ಕಾಣಿ ಹಿಡಿಯಲಿದ್ದಾರೆ ಎನ್ನಲಾಗುತ್ತಿದೆ. ಮೂಲಗಳ ಪ್ರಕಾರ ರೂಪಾನಿಗೆ ಬಿಜೆಪಿ ಮುಖ್ಯಮಂತ್ರಿ ಪಟ್ಟವನ್ನು ನೀಡುತ್ತಿದೆ ಎನ್ನುವ ಮಾತುಗಳು ಕೇಳಿ ಬಂದಿದೆ.
ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದ ಬಳಿಕ ಮುಖ್ಯಮಂತ್ರಿ ವಿಜಯ್ ರೂಪಾನಿ ಹಾಗೂ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಅವರೆ ಮುಂದುವರಿಯಲಿದ, ಇಬ್ಬರು ಉಪ ಮುಖ್ಯಮಂತ್ರಿಗಳನ್ನ ನೇಮಕ ಮಾಡಲಾಗುತ್ತದೆ ಎನ್ನಲಾಗುತ್ತಿದೆ.
ಆದರೆ ಈ ಹಿಂದೆ ಮುಖ್ಯಮಂತ್ರಿ ಸ್ಥಾನಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿದಂತೆ ಅನೇಕ ಹೆಸರುಗಳು ಕೂಡ ಕೇಳಿ ಬಂದಿತ್ತು.
