ವಿಜಯಲಕ್ಷ್ಮೀಯ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ, ಚಿಕಿತ್ಸೆಗೆ ಸ್ಪಂದಿಸುವ ಇವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಬಾಗಲಕೋಟೆ(ಆ.13): ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಪ್ರಕರಣದಲ್ಲಿ ಹೆಸರು ಕೇಳಿ ಬಂದಿದ್ದ ಸಂತ್ರಸ್ಥ ಮಹಿಳೆ ವಿಜಯಲಕ್ಷ್ಮಿ ಸರೂರ ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥವಾಗಿರುವ ಘಟನೆ ಬಾಗಲಕೋಟೆಯಲ್ಲಿ ಜರುಗಿದೆ.
ಸಂತ್ರಸ್ಥೆ ಮಹಿಳೆ ಮನೆಯಲ್ಲಿರುವಾಗ ನಿದ್ರೆ ಮಾತ್ರ ಸೇವಿಸಿ ಅಸ್ವಸ್ಥಳಾಗಿದ್ದು, ಜಿಲ್ಲಾಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಜಯಲಕ್ಷ್ಮೀಯ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ, ಚಿಕಿತ್ಸೆಗೆ ಸ್ಪಂದಿಸುವ ಇವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
