ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವರ್ಸಸ್‌ ಯಡಿಯೂರಪ್ಪ ಅಥವಾ ಯತೀಂದ್ರ ವರ್ಸಸ್‌ ವಿಜಯೇಂದ್ರ ಅಲ್ಲ. ಬಿಜೆಪಿ ಮತ್ತು ಕಾಂಗ್ರೆಸ್‌ ಮಧ್ಯೆ ಚುನಾವಣೆ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರು : ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವರ್ಸಸ್‌ ಯಡಿಯೂರಪ್ಪ ಅಥವಾ ಯತೀಂದ್ರ ವರ್ಸಸ್‌ ವಿಜಯೇಂದ್ರ ಅಲ್ಲ. ಬಿಜೆಪಿ ಮತ್ತು ಕಾಂಗ್ರೆಸ್‌ ಮಧ್ಯೆ ಚುನಾವಣೆ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಶುಕ್ರವಾರ ನಗರದಲ್ಲಿ ಯಡಿಯೂರಪ್ಪ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳನ್ನು ಎದುರಿಸಲು ಸಮರ್ಥ ಅಭ್ಯರ್ಥಿ ಬೇಕು ಎಂಬ ಕಾರಣಕ್ಕೆ ವರುಣಾ ಕ್ಷೇತ್ರದ ಕಾರ್ಯಕರ್ತರು ನನ್ನ ಹೆಸರು ಪ್ರಸ್ತಾಪಿಸಿದ್ದಾರೆ ಎಂದರು.

ಮೊನ್ನೆ ಮೈಸೂರು ಜಿಲ್ಲೆಗೆ ಭೇಟಿ ನೀಡಿದ ವೇಳೆ ವರುಣಾದಿಂದ ಸ್ಪರ್ಧೆ ಮಾಡುವ ಸಂಬಂಧ ಚರ್ಚೆ ನಡೆಸಿದ್ದೇನೆ. ಬಿಜೆಪಿ ಒಂದು ರಾಷ್ಟ್ರೀಯ ಪಕ್ಷವಾಗಿರುವ ಕಾರಣ ವರಿಷ್ಠರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬುದನ್ನು ಎದುರು ನೋಡುತ್ತಿದ್ದೇನೆ ಎಂದು ಇದೇ ವೇಳೆ ವಿಜಯೇಂದ್ರ ತಿಳಿಸಿದರು.