ಪರಿವರ್ತನಾ ರ‍್ಯಾಲಿ ಆಯ್ತು, ಜನಾಶೀರ್ವಾದ ಆಯ್ತು, ಇಂದು ಶುರುವಾಗಲಿದೆ ವಿಕಾಸ ಪರ್ವ

First Published 17, Feb 2018, 9:39 AM IST
Vikasa Parva will Begin from today
Highlights

ಬಿಜೆಪಿ ಪರಿವರ್ತನಾ ರ‍್ಯಾಲಿ ಸಮಾರೋಪಕ್ಕೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಜನಾಶೀರ್ವಾದ ಯಾತ್ರೆಗೆ ರಾಹುಲ್ ಗಾಂಧಿ ಬಂದುಹೋದ ಬೆನ್ನಲ್ಲೇ ಜೆಡಿಎಸ್ ವಿಕಾಸಪರ್ವ ಬೃಹತ್ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ.

ಬೆಂಗಳೂರು (ಫೆ.17): ಬಿಜೆಪಿ ಪರಿವರ್ತನಾ ರ‍್ಯಾಲಿ ಸಮಾರೋಪಕ್ಕೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಜನಾಶೀರ್ವಾದ ಯಾತ್ರೆಗೆ ರಾಹುಲ್ ಗಾಂಧಿ ಬಂದುಹೋದ ಬೆನ್ನಲ್ಲೇ ಜೆಡಿಎಸ್ ವಿಕಾಸಪರ್ವ ಬೃಹತ್ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ.

ಇಂದು ಯಲಹಂಕದ ನಿಟ್ಟೆ ಮೀನಾಕ್ಷಿ ಕಾಲೇಜು ಮುಖ್ಯ ರಸ್ತೆಯಲ್ಲಿರುವ ರೆಯಾನ್ ಸ್ಕೂಲ್ ಬಳಿ ಆಯೋಜಿಸಿರುವ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ 10 ಲಕ್ಷ ಕಾರ್ಯಕರ್ತರು ಸೇರುವ ನಿರೀಕ್ಷೆಯಿದೆ. ಬಹುಜನ ಸಮಾಜ ಪಾರ್ಟಿ (ಬಿಎಸ್​ಪಿ) ಜತೆ ಮೈತ್ರಿ ಮಾಡಿಕೊಂಡ ಬಳಿಕ ನಡೆಯುತ್ತಿರುವ ಸಮಾವೇಶದಲ್ಲಿ ಬಿಎಸ್​ಪಿಯ ಪರಮೋಚ್ಚ ನಾಯಕಿ ಮಾಯಾವತಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ, ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸೇರಿ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ.

ಈ ಮೂಲಕ ಪೂರ್ಣ ಪ್ರಮಾಣದ ಚುನಾವಣಾ ಪ್ರಚಾರಕ್ಕೆ ಚಾಲನೆ ಸಿಗಲಿದೆ. 500 ಎಕರೆ ಜಾಗದಲ್ಲಿ ಸುಸಜ್ಜಿತ ರ್ಪಾಂಗ್ ವ್ಯವಸ್ಥೆ, 130 ಎಕರೆ ಜಾಗದಲ್ಲಿ ಸಮಾವೇಶಕ್ಕೆ ಸಿದ್ಧತೆ ಪೂರ್ಣಗೊಂಡಿವೆ. 100 ಎಲ್​ಸಿಡಿ ಪ್ರಚಾರದ ವಾಹನಗಳಿಗೆ ಇದೇ ಸಂದರ್ಭದಲ್ಲಿ ಚಾಲನೆ ನೀಡಲಾಗುತ್ತದೆ. ಚುನಾವಣೆಯಲ್ಲಿ ಸ್ಪರ್ಧಿಸುವ 140 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಸ್ವಚ್ಛ, ಪಾರದರ್ಶಕ, ಭ್ರಷ್ಟಾಚಾರರಹಿತ ಆಡಳಿತ ನೀಡುವ ಕುರಿತು ಅಭ್ಯರ್ಥಿಗಳಿಗೆ ಹಿರಿಯ ವ್ಯಕ್ತಿಯೊಬ್ಬರಿಂದ ಪ್ರತಿಜ್ಞಾವಿಧಿ ಬೋಧಿಸಲಾಗುತ್ತದೆ. 
 

loader