ಗ್ರಾಮದ ತುಂಬಾ ಚರಂಡಿ ನೀರು ಹರಿಯುತ್ತಿದ್ದು, ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆದರೆ ಅಧಿಕಾರಿಗಳು ಮಾತ್ರ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದರು. ಬೇಸತ್ತ ಲಕ್ಕುಂಡಿ ಗ್ರಾಮಸ್ಥರು ಬೀದಿಯಲ್ಲಿ ಭಜನೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ಗದಗ (ಅ.24): ಚರಂಡಿ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಗದಗ ತಾಲೂಕಿನ ಲಕ್ಕುಂಡಿ ಗ್ರಾಮಸ್ಥರು ವಿನೂತನ ಪ್ರತಿಭಟನೆ ನಡೆಸಿದ್ದಾರೆ.

ಭಜನೆ ಮಾಡುವ ಮೂಲಕ ಅಧಿಕಾರಿಗಳ ಬೇಜವಾಬ್ದಾರಿಯನ್ನು ಖಂಡಿಸಿದ್ದಾರೆ. ಸಮರ್ಪಕ ನಿರ್ವಹಣೆ ಇಲ್ಲದೆ ಗ್ರಾಮದ ತುಂಬಾ ಚರಂಡಿ ನೀರು ಹರಿಯುತ್ತಿದ್ದು, ಈ ಬಗ್ಗೆ ಗ್ರಾಮ ಪಂಚಾಯತ್ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. 

ಆದರೆ ಅಧಿಕಾರಿಗಳು ಮಾತ್ರ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದರು. ಇದರಿಂದ ಬೇಸತ್ತ ಲಕ್ಕುಂಡಿ ಗ್ರಾಮಸ್ಥರು ಬೀದಿಯಲ್ಲಿ ಭಜನೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಜನಪದ ಶೈಲಿಯಲ್ಲಿ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಚಾಟಿ ಬೀಸಿದ್ದಾರೆ.