ಎರಡು ಗುಂಪುಗಳ ಬೆಂಬಲಿಗರು ಬಡಿದಾಡಿಕೊಂಡಿದ್ದಾರೆ. ಪರಿಣಾಮ ಮಾಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
ರಾಮನಗರ(ಅ.22): ಮಾಗಡಿಯಲ್ಲಿ ಮಾರುಕಟ್ಟೆ ಸ್ಥಳಾಂತರ ವಿಚಾರಕ್ಕೆ ಶಾಸಕ ಬಾಲಕೃಷ್ಣ ಮತ್ತು ಕೆಪಿಸಿಸಿ ಸದಸ್ಯ ಎ.ಮಂಜು ಮಧ್ಯೆ ಗಲಾಟೆ ನಡೆದಿದೆ. ಎರಡು ಗುಂಪುಗಳ ಬೆಂಬಲಿಗರು ಬಡಿದಾಡಿಕೊಂಡಿದ್ದಾರೆ. ಪರಿಣಾಮ ಮಾಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಎ.ಮಂಜು ಬೆಂಬಲಿಗ ದಂಡಿಗೆಪುರ ಅಶೋಕ್ ಮೇಲೆ ಶಾಸಕ ಬಾಲಕೃಷ್ಣ ಸೋದರ ಹಾಗೂ ಗನ್ ಮ್ಯಾನ್ ಹಲ್ಲೆ ನಡೆಸಿದ್ದಾರೆ ಅಂತ ಹೇಳಲಾಗ್ತಿದೆ. ಸದ್ಯ ಮಾಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
