ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ಸರ್ಕಾರದ ಸಾಧನೆ ಉತ್ತಮವಾಗಿದೆ ಎಂದು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಶ್ಲಾಘಿಸಿದ್ದಾರೆ. ಅಲ್ಲದೇ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿಯವರ ಹೇಳಿಕೆಗೆ ವಿರುದ್ಧವಾದ ಹೇಳಿಕೆಗಳನ್ನು ನೀಡಿದ್ದಾರೆ. ಇಂಥದ್ದೊಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣ ಟ್ವೀಟರ್‌ನಲ್ಲಿ ಹರಿದಾಡುತ್ತಿದೆ. ಇದೆಷ್ಟು ನಿಜ? ಇಲ್ಲಿದೆ ವಾಸ್ತವತೆ

ನವದೆಹಲಿ[ನ.30]: ಮಧ್ಯಪ್ರದೇಶ ಹಾಗೂ ಛತ್ತಿಸ್‌ಗಢದಲ್ಲಿ ಸದ್ಯ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಈ ಮಧ್ಯೆ ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ಸರ್ಕಾರದ ಸಾಧನೆ ಉತ್ತಮವಾಗಿದೆ ಎಂದು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಶ್ಲಾಘಿಸಿದ್ದಾರೆ. ಅಲ್ಲದೇ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿಯವರ ಹೇಳಿಕೆಗೆ ವಿರುದ್ಧವಾದ ಹೇಳಿಕೆಗಳನ್ನು ನೀಡಿದ್ದಾರೆ. ಇಂಥದ್ದೊಂದು ವಿಡಿಯೋ ಇದೀಗ ಸಾಮಾಜಿಕ ಜಾಲತಾಣ ಟ್ವೀಟರ್‌ನಲ್ಲಿ ಹರಿದಾಡುತ್ತಿದೆ.

ಕಾಂಗ್ರೆಸ್‌ ಮುಖಂಡ ಮನೀಶ್‌ ತಿವಾರಿ ಅವರ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ವೇಳೆ ಮನಮೋಹನ್‌ ಸಿಂಗ್‌, ಛತ್ತೀಸ್‌ಗಢ ಹಾಗೂ ಮಧ್ಯಪ್ರದೇಶ ಸರ್ಕಾರ ಉತ್ತಮವಾಗಿದೆ ಎಂದು ಹೇಳಿರುವ ವಿಡಿಯೋ ಕ್ಲಿಪ್‌ ಅನ್ನು ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್‌ ಮಾಳವೀಯ ಟ್ವೀಟ್‌ ಮಾಡಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್‌ ಆಗಿದೆ.

Scroll to load tweet…

ಆದರೆ, ಕಾರ್ಯಕ್ರಮದ ವೇಳೆ ಪತ್ರಕರ್ತ ರಾಜದೀಪ್‌ ಸರ್ದೇಸಾಯಿ ಅವರು ಕೇಳಿದ ಪ್ರಶ್ನೆಗೆ ಮನಮೋಹನ್‌ ಸಿಂಗ್‌ ದೀರ್ಘವಾಗಿ ಉತ್ತರಿಸಿದ್ದು, ಮೋದಿ ಅವರನ್ನು ತರಾಟೆ ತೆಗೆದುಕೊಂಡಿದ್ದಾರೆ. ತಾವು ಪ್ರಧಾನಿಯಾಗಿದ್ದಾಗ ಮಧ್ಯಪ್ರದೇಶ, ಛತ್ತೀಸ್‌ಗಢದಂತಹ ಬಿಜೆಪಿ ಆಡಳಿತದ ರಾಜ್ಯಗಳ ಜತೆಗೂ ಸಂಬಂಧ ಉತ್ತಮವಾಗಿತ್ತು ಎಂದು ಹೇಳುತ್ತಾರೆ. ಆದರೆ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢ ಸರ್ಕಾರ ಉತ್ತಮವಾಗಿದೆ ಎಂದು ಹೇಳಿದಂತೆ ಅರ್ಥ ಬರುವ ವಿಡಿಯೋ ತುಣಕನ್ನು ಮಾತ್ರ ಕತ್ತರಿಸಿ ಅಮಿತ್‌ ಮಾಳವೀಯ ಟ್ವೀಟ್‌ ಮಾಡಿದ್ದರು.

Scroll to load tweet…

ಇದಕ್ಕೆ ಪ್ರತಿಯಾಗಿ ಪೂರ್ಣ ಕ್ಲಿಪ್‌ ಅನ್ನು ಕಾಂಗ್ರೆಸ್‌ ಟ್ವೀಟ್‌ ಮಾಡಿದ್ದು, ಮನಮೋಹನ್‌ ಸಿಂಗ್‌ ಅವರ ಬೆಂಬಲಕ್ಕೆ ನಿಂತಿದೆ.