ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ತಾರೆ ಅನುಷ್ಕಾ ಶರ್ಮಾ ಸಂಬಂಧದ ಬಗ್ಗೆ ಇದ್ದ ಊಹಾಪೋಹಗಳಿಗೆ ತೆರೆ ಬಿದ್ದಿದ್ದು, ಇಟಲಿಯ ಟ್ಯೂಸೆನಿಯ ರೆಸಾರ್ಟ್ ಒಂದರ ಅದ್ಧೂರಿ ವಿವಾಹಕ್ಕೆ ವೇದಿಕೆ ಸಜ್ಜಾಗಿದೆ.

ನವದೆಹಲಿ (ಡಿ.10): ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ತಾರೆ ಅನುಷ್ಕಾ ಶರ್ಮಾ ಸಂಬಂಧದ ಬಗ್ಗೆ ಇದ್ದ ಊಹಾಪೋಹಗಳಿಗೆ ತೆರೆ ಬಿದ್ದಿದ್ದು, ಇಟಲಿಯ ಟ್ಯೂಸೆನಿಯ ರೆಸಾರ್ಟ್ ಒಂದರ ಅದ್ಧೂರಿ ವಿವಾಹಕ್ಕೆ ವೇದಿಕೆ ಸಜ್ಜಾಗಿದೆ.

ಹೀಗಾಗಿ ರೆಸಾರ್ಟ್'ಗೆ ಬಿಗಿ ಭದ್ರತೆ ಒದಗಿಸಲಾಗಿದ್ದು, ಆಹ್ವಾನಪತ್ರ ಹೊಂದಿದ ಅತಿಥಿಗಳಿಗಷ್ಟೇ ವಿವಾಹ ಸಮಾರಂಭಕ್ಕೆ ಪ್ರವೇಶ ಇದೆ. ಸಾಂಪ್ರದಾಯಿಕ ಪಂಜಾಬಿ ಶೈಲಿಯಲ್ಲಿ ವಿವಾಹ ಸಿದ್ಧತೆಗಳು ನಡೆದಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲದ ವಿರಾಟ್ ಅನುಷ್ಕಾ ವಿವಾಹಕ್ಕೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮತ್ತು ಆಲ್ರೌಂಡರ್ ಯುವರಾಜ್ ಸಿಂಗ್ ಅವರಿಗೆ ಮಾತ್ರ ವಿವಾಹದ ಆಮಂತ್ರಣ ನೀಡಲಾಗಿದೆ. ಕಾರಣ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಭಾರತದ ಕ್ರಿಕೆಟ್ ತಂಡದ ಬಹುತೇಕ ಸದಸ್ಯರು ಬ್ಯುಸಿಯಾಗಿರುವ ಹಿನ್ನೆಲೆಯಲ್ಲಿ ತಂಡದ ಯಾರನ್ನೂ ಆಹ್ವಾನಿಸಿಲ್ಲ ಎಂದು ಕೊಹ್ಲಿಯ ಆಪ್ತ ಮೂಲಗಳು ತಿಳಿಸಿವೆ.