ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸೋಲಿನ ಹತಾಶೆ ಕಾಡುತ್ತಿದ್ದು, ಈ ಭಯದಿಂದ ‘ನಾನೇ ಮುಂದಿನ ಮುಖ್ಯಮಂತ್ರಿ’ ಎಂದು ಚಡಪಡಿಸುತ್ತಿದ್ದಾರೆ ಎಂದು ಮಾಜಿ ಸಂಸದ, ಜೆಡಿಎಸ್ ನಾಯಕ ಎಚ್. ವಿಶ್ವನಾಥ್ ಟೀಕಿಸಿದ್ದಾರೆ.

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸೋಲಿನ ಹತಾಶೆ ಕಾಡುತ್ತಿದ್ದು, ಈ ಭಯದಿಂದ ‘ನಾನೇ ಮುಂದಿನ ಮುಖ್ಯಮಂತ್ರಿ’ ಎಂದು ಚಡಪಡಿಸುತ್ತಿದ್ದಾರೆ ಎಂದು ಮಾಜಿ ಸಂಸದ, ಜೆಡಿಎಸ್ ನಾಯಕ ಎಚ್. ವಿಶ್ವನಾಥ್ ಟೀಕಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಲ್ಲಿ ಗುರುವಾರ ಹಾಸನಾಂಬ ದೇವಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅವರು ನಾವು ಜನತಂತ್ರ ವ್ಯವಸ್ಥೆಯಲ್ಲಿ ಇದ್ದೇವೆ ಅನ್ನುವುದನ್ನೇ ಮರೆತಿದ್ದಾರೆ. ಭಯದಿಂದ ಚುನಾವಣೆ ಆಗುವ ಮೊದಲೇ ಮುಂದಿನ ಮುಖ್ಯಮಂತ್ರಿ ನಾನೇ ಎಂಬಂತಹ ಹೇಳಿಕೆ ನೀಡುತ್ತಿದ್ದಾರೆ, ಎಂದು ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ.

ತಮ್ಮ ಭ್ರಮೆಯನ್ನು ಜನರಿಗೆ ನಂಬಿಸೋ ಕೆಲಸವನ್ನು ಮಾಡುತ್ತಿದ್ದಾರೆ. ಅವರಿಗೆ ಈಗಾಗಲೇ ಸೋಲಿನ ಭಯ ಕಾಡತೊಡಗಿದೆ ಎಂದು ಅವರು ಹೇಳಿದ್ದಾರೆ.