Asianet Suvarna News Asianet Suvarna News

ಸ್ವಯಂಪ್ರೇರಿತ ದೂರು ದಾಖಲು

ವಿಚಾರಣೆ ನಡೆಸಿದ ನ್ಯಾಯಾಧೀಕರಣದ ಅಧ್ಯಕ್ಷ  ನ್ಯಾಯಮೂರ್ತಿ ಸ್ವತಂತ್ರಕುಮಾರ ಇದ್ದ ಪೀಠ ಮಾರ್ಚ್ 20ಕ್ಕೆ ವಿಚಾರಣೆಯನ್ನು ಮುಂದೂಡಿದೆ.. ಅಲ್ಲದೆ ಮಾಲಿನ್ಯ ನಿಯಂತ್ರಣ ಮಂಡಳಿ, ಕೆರೆ ಅಭಿವೃದ್ಧಿ ಪ್ರಾಧಿಕಾರವನ್ನು ತೀವ್ರ ತರಾಟೆಗೆ ತೆಗದುಕೊಂಡಿದೆ

Voluntary Complaint filed

ಬೆಳ್ಳಂದೂರು ಕೆರೆಯಲ್ಲಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಬೆಂಗಳೂರು ಫೌಂಡೇಷನ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ರಾಷ್ಟ್ರೀಯ ನ್ಯಾಯಾಧೀಕರಣ ಸ್ವಯಂಪ್ರೇರಿತ ಪ್ರಕರಣವನ್ನು ದಾಖಲು ಮಾಡಿಕೊಂಡಿದೆ. ಅಲ್ಲದೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ, BDA, BWSSB, ಕೆರೆ ಅಭಿವೃದ್ಧಿ ಪ್ರಾಧಿಕಾರಕ್ಕೆ ನೋಟಿಸ್ ಅನ್ನು ಜಾರಿ ಮಾಡಿದೆ. ಇನ್ನು ಬೆಂಗಳೂರು ಅಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ಖುದ್ದು ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಕರಣದ ಅಧ್ಯಕ್ಷ  ನ್ಯಾಯಮೂರ್ತಿ ಸ್ವತಂತ್ರಕುಮಾರ ಇದ್ದ ಪೀಠ ಮಾರ್ಚ್ 20ಕ್ಕೆ ವಿಚಾರಣೆಯನ್ನು ಮುಂದೂಡಿದೆ.. ಅಲ್ಲದೆ ಮಾಲಿನ್ಯ ನಿಯಂತ್ರಣ ಮಂಡಳಿ, ಕೆರೆ ಅಭಿವೃದ್ಧಿ ಪ್ರಾಧಿಕಾರವನ್ನು ತೀವ್ರ ತರಾಟೆಗೆ ತೆಗದುಕೊಂಡಿದೆ.. ಬೆಳ್ಳಂದೂರು ಕೆರೆ ನಿರ್ಲಕ್ಷ್ಯದ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ಎನ್​ಜಿಟಿ, ಬೆಳ್ಳಂದೂರು ಕೆರೆ ಪುನಶ್ಚೇತನಕ್ಕೆ ಏನು ಕ್ರಮಕೈಗೊಂಡಿದ್ದೀರಿ? ಕೆರೆಯಲ್ಲಿ ಮಾಲಿನ್ಯ, ಬೆಂಕಿ ಬಿದ್ದ ಬಗ್ಗೆ ಉತ್ತರಿಸುವಂತೆ ಸೂಚಿಸಿದ್ದು ಈ ಕುರಿತು 2 ವಾರದಲ್ಲಿ ನೋಟಿಸ್​ಗೆ ಉತ್ತರಿಸುವಂತೆ ಸೂಚನೆ ನೀಡಲಾಗಿದೆ..

Follow Us:
Download App:
  • android
  • ios