ವಿಧಾನಸಭಾ ಚುನಾವಣೆಗೆ ಮತದಾರರ ಪಟ್ಟಿ ಪರಿಷ್ಕರಣೆ, ರದ್ಧತಿಯ ಗಡುವನ್ನು ಜನವರಿ 12 ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಬಿಬಿಎಂಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.
ಬೆಂಗಳೂರು (ಜ.04): ವಿಧಾನಸಭಾ ಚುನಾವಣೆಗೆ ಮತದಾರರ ಪಟ್ಟಿ ಪರಿಷ್ಕರಣೆ, ರದ್ಧತಿಯ ಗಡುವನ್ನು ಜನವರಿ 12 ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಬಿಬಿಎಂಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.
8,284 ಬೂತ್'ಗಳ ರಚನೆ ಮಾಡಿದ್ದು ವಾರ್ಡ್'ಗಳಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಲಾಗಿದೆ. ಜನವರಿ 12 ರ ನಂತರ ಬಂದ ಅರ್ಜಿಗಳನ್ನು ಪರಿಷ್ಕರಣೆ ಮಾಡಿ ಮತದಾರರ ಪಟ್ಟಿಯಲ್ಲಿ ಸೇರಿಸಲಾಗುವುದು. ಫೆಬ್ರವರಿ 20 ಕ್ಕೆ ಪರಿಷ್ಕೃತ ಮತದಾರರ ಪಟ್ಟಿ ಪ್ರಕಟ ಮಾಡಲಾಗುವುದು. ನಂತರವೂ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದು ಆದರೆ ಮುಂಬರುವ ಚುನಾವಣಾ ದೃಷ್ಠಿಯಿಂದ ಅವಧಿಗೂ ಮುನ್ನ ಅರ್ಜಿ ಸಲ್ಲಿಸುವುದು ಉತ್ತಮ ಎಂದು ಮಂಜುನಾಥ್ ಪ್ರಸಾದ್ ಹೇಳಿದ್ದಾರೆ.
