ಗದಗ ಜಿಲ್ಲೆಯ ಬಿಸಿಎಂ ವಸತಿ ನಿಲಯದಲ್ಲಿ ಹಾಸ್ಟೆಲ್ ಮೇಲ್ವಿಚಾರಕಿ ವಿದ್ಯಾರ್ಥಿನಿಯರಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಅಮಾನವೀಯ ಘಟನೆ ನಡೆದಿದೆ.
ಗದಗ: ಗದಗ ಜಿಲ್ಲೆಯ ಬಿಸಿಎಂ ವಸತಿ ನಿಲಯದಲ್ಲಿ ಹಾಸ್ಟೆಲ್ ಮೇಲ್ವಿಚಾರಕಿ ವಿದ್ಯಾರ್ಥಿನಿಯರಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಅಮಾನವೀಯ ಘಟನೆ ನಡೆದಿದೆ.
ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ವಸತಿ ನಿಲಯದ ಮೇಲ್ವಿಚಾರಕಿ ಶಾಂತಾ ವಿದ್ಯಾರ್ಥಿನಿಯರಿಗೆ ಊಟ ಕೊಡದೇ ಸತಾಯಿಸುತ್ತಿರುವ ಬಗ್ಗೆ ಜಿಲ್ಲಾ ಪಂಚಾಯತ್ ಸದಸ್ಯೆ ಬಳಿ ವಿದ್ಯಾರ್ಥಿನಿಯರು ಅಳಲು ತೋಡಿಕೊಂಡಿದ್ದಾರೆ.
ಸರ್ಕಾರ ಕೋಟಿ ಕೋಟಿ ಹಣ ನೀಡಿದರೂ ಮಕ್ಕಳಿಗೆ ಅರ್ಧ ಹೊಟ್ಟೆ ಊಟ ಹಾಕುವ ಇಂಥಾ ಅಮಾನವೀಯ ಘಟನೆ ನಡೆದರೂ ಅಧಿಕಾರಿಗಳು ಕ್ರಮ ಕೈಗೊಳ್ಳಲಿಲ್ಲವೆನ್ನಲಾಗಿದೆ.
