ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಮಾಡಿದವರ ಸ್ಪಷ್ಟ ಸುಳಿವು ಎಸ್‌ಐಟಿ ತಂಡಕ್ಕೆ ಸಿಕ್ಕಿದ್ದು, ಶೀಘ್ರದಲ್ಲೇ ಹಂತಕರ ಬಂಧನವಾಗಲಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.

ಚಿಕ್ಕಬಳ್ಳಾಪುರ(ಸ.03): ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಮಾಡಿದವರ ಸ್ಪಷ್ಟ ಸುಳಿವು ಎಸ್‌ಐಟಿ ತಂಡಕ್ಕೆ ಸಿಕ್ಕಿದ್ದು, ಶೀಘ್ರದಲ್ಲೇ ಹಂತಕರ ಬಂಧನವಾಗಲಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿದ್ದು ಯಾರು ಮತ್ತು ಯಾಕೆ ಎಂಬ ವಿಚಾರ ಸ್ಪಷ್ಟವಾಗಿದೆ. ಆದರೆ, ಆ ಕುರಿತು ಈಗಲೇ ಮಾಧ್ಯಮಕ್ಕೆ ಎಲ್ಲಾ ವಿವರಗಳನ್ನು ಬಹಿರಂಗಪಡಿಸಲಾಗದು.

ಹತ್ಯೆಗೆ ಸಂಬಂಧಿಸಿ ಸೂಕ್ತ ಸಾಕ್ಷ್ಯಾಧಾರ ಗಳನ್ನು ಕಲೆ ಹಾಕುವಲ್ಲಿ ಎಸ್‌'ಐಟಿ ತಂಡ ನಿರತವಾಗಿದೆ. ಸೂಕ್ತ ಪುರಾವೆಗಳನ್ನು ಸಂಗ್ರಹಿಸದೆ ಆರೋಪಿಗಳನ್ನು ಬಂಧಿಸಿದರೆ ಪ್ರಕರಣ ಬಿದ್ದುಹೋಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು.