ಪಂಚರಾಜ್ಯ ಚುನಾವಣೆಯಲ್ಲಿ ಪಂಜಾಬ್, ಮಣಿಪುರ ಹಾಗೂ ಗೋವಾದಲ್ಲಿ ಕಾಂಗ್ರೆಸ್ ಗೆಲುವನ್ನು ಸಾಧಿಸಿರುವುದು ದೇಶದ ಜನಮಾನಸದಲ್ಲಿ ನಾವಿದ್ದೇವೆ ಎಂಬುದನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.

ನವದೆಹಲಿ (ಮಾ.11): ಪಂಚರಾಜ್ಯ ಚುನಾವಣೆಯಲ್ಲಿ ಪಂಜಾಬ್, ಮಣಿಪುರ ಹಾಗೂ ಗೋವಾದಲ್ಲಿ ಕಾಂಗ್ರೆಸ್ ಗೆಲುವನ್ನು ಸಾಧಿಸಿರುವುದು ದೇಶದ ಜನಮಾನಸದಲ್ಲಿ ನಾವಿದ್ದೇವೆ ಎಂಬುದನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಾಂಗ್ರೆಸ್ ಮುಕ್ತ ಭಾರತವನ್ನು ಸ್ಥಾಪಿಸುವುದಾಗಿ ಮಾತನಾಡುವವರಿಗೆ ಈ ಗೆಲುವು ದೊಡ್ಡ ಸೋಲಾಗಿದೆ. ಕಾಂಗ್ರೆಸ್ ದೇಶದ ಹೃದಯ ಭಾಗದಲ್ಲಿದೆ. ಯಾವಾಗಲೂ ಇದ್ದೇ ಇರುತ್ತದೆ. ಕಾಂಗ್ರೆಸ್ ಮುಕ್ತ ಭಾರತ ಸಾಧ್ಯವೇ ಇಲ್ಲವೆಂದು ಹೇಳಿದ್ದಾರೆ.

ುತ್ತರ ಪ್ರದೇಶ ಹಾಗೂ ಉತ್ತರಖಂಡದಲ್ಲಿ ಹೀನಾಯವಾಗಿ ಸೋತಿರುವುದನ್ನು ಒಪ್ಪಿಕೊಂಡ ಕಾಂಗ್ರೆಸ್ ಸೋಲಿಗೆ ಕಾರಣಗಳನ್ನು ಅವಲೋಕಿಸಬೇಕು ಎಂದಿದ್ದಾರೆ.

ಉತ್ತರ ಪ್ರದೇಶ ಅಭಿವೃದ್ದಿಗಾಗಿ ಕಾಂಗ್ರೆಸ್-ಎಸ್ಪಿ ಕೈಜೋಡಿಸಿತು. ಆದರೆ ಜನರು ಇದನ್ನು ಒಪ್ಪಲಿಲ್ಲ. ೀ ಸೋಲನ್ನು ನಾವು ಒಪ್ಪಿಕೊಳ್ಳುತ್ತೇವೆ. ಬೇರೆ ರಾಜ್ಯಗಳಲ್ಲಿ ಗೆದ್ದಿರುವ ಬಗ್ಗೆ ಖುಷಿಯಿದೆ. ಕೆಲವೊಮ್ಮೆ ಸೋಲುಗಳು ಪಾಠ ಕಲಿಸುತ್ತವೆ ಎಂದಿದ್ದಾರೆ.