ನಮ್ಮ ಸರ್ಕಾರವು ಭಾರತವನ್ನು ಜಾಗತಿಕ ನಕ್ಷೆಯಲ್ಲಿ ಉತ್ಪಾದನಾ ಕೇಂದ್ರವನ್ನಾಗಿ ಮಾಡಬಯಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮನಿಲಾ, ಫಿಲಿಪೈನ್ಸ್: ನಮ್ಮ ಸರ್ಕಾರವು ಭಾರತವನ್ನು ಜಾಗತಿಕ ನಕ್ಷೆಯಲ್ಲಿ ಉತ್ಪಾದನಾ ಕೇಂದ್ರವನ್ನಾಗಿ ಮಾಡಬಯಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಆಸಿಯಾನ್’ನಲ್ಲಿ ವಾಣಿಜ್ಯ ಮತ್ತು ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಮೋದಿ, ನಾವು ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವನ್ನಾಗಿ ಮಾಡಬಯಸುತ್ತೇವೆ. ನಮ್ಮ ಯುವಜನರು ಉದ್ಯೋಗ ಸೃಷ್ಟಿಸುವವರಾಗಬೇಕು, ಎಂದು ಹೇಳಿದ್ದಾರೆ.

ಆಸಿಯಾನ್ ದೇಶಗಳ ಉದ್ಯಮಿಗಳನ್ನು ಭಾರತದಲ್ಲಿ ಹೂಡಿಕೆ ಮಾಡಲು ಆಹ್ವಾನಿಸಿದ ಮೋದಿ, ದೇಶದ ಬಹುತೇಕ ವಲಯಗಳು ವಿದೇಶಿ ಹೂಡಿಕೆಗೆ ಮುಕ್ತವಾಗಿವೆ ಎಂದು ಈ ಸಂದರ್ಭದಲ್ಲಿ ಹೇಳಿದ್ದಾರೆ.

ಭಾರತ ಹಿಂದಿಗಿಂತಲೂ ಹೆಚ್ಚು ವೇಗದಲ್ಲಿ ಪರಿವರ್ತನೆಯಾಗುತ್ತಿದೆ. ಸರಳ, ಪರಿಣಾಮಕಾರಿ ಹಾಗೂ ಪಾರದರ್ಶಕ ಆಡಳಿತ ಹೊಂದಲು ನಾವು ಹಗಲು ರಾತ್ರಿ ಶ್ರಮಿಸುತ್ತಿದ್ದೇವೆ. ಡಿಜಿಟಲ್ ವ್ಯವಹಾರಗಳು ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಜನರನ್ನು ತಲುಪಲು ನಾವು ತಂತ್ರಜ್ಞಾನವನ್ನು ಹೆಚ್ಚೆಚ್ಚು ಬಳಸುತ್ತಿದ್ದೇವೆ ಎಂದು ಮೋದಿ ಹೇಳಿದ್ದಾರೆ.

ಬಹಳಷ್ಟು ಮಂದಿಗೆ ಬ್ಯಾಂಕಿಂಗ್ ಸೇವೆ ಲಭ್ಯವಾಗಿರಲ್ಲಿಲ್ಲ. ಆದರೆ ಜನ-ಧನ ಯೋಜನೆಯನ್ನು ಜಾರಿಗೆ ತಂದ ನಂತರ ಮಿಲಿಯನ್’ಗಟ್ಟಲೆ ಜನರ ಜೀವನ ಬದಲಾಗಿದೆ, ಎಂದು ಪ್ರಧಾನಿ ಹೇಳಿದ್ದಾರೆ.