ಈ ಬಾರಿಯೂ ಇಫ್ತಾರ್ ಕೂಟ ಮಾಡಲಿದ್ದೇವೆ: ಪೇಜಾವರ ಶ್ರೀ

news | Friday, June 1st, 2018
Suvarna Web Desk
Highlights

ಈ ಬಾರಿಯೂ ಇಫ್ತಾರ್ ಕೂಟ ಮಾಡಬೇಕೆಂಬ ಭಾವನೆ ಇದೆ.  ಮುಸಲ್ಮಾನ ನಾಯಕರು, ಪ್ರಮುಖರು ಒಪ್ಪಿದರೆ ಸತ್ಕಾರ ಕೂಟ ಮಾಡುತ್ತೇನೆ. ಈ ಬಾರಿ  ಮುಸ್ಲೀಮರು ಇಫ್ತಾರ್ ಕೂಟಕ್ಕೆ ಬಹಳ ಉತ್ಸಾಹ ತೋರಿಸುತ್ತಿಲ್ಲ. ಕಳೆದ ಬಾರಿಯ ಇಫ್ತಾರ್ ಕೂಟ ಬಹಳ ಚರ್ಚೆಯಾಗಿತ್ತು. ಮೂರ್ತಿ ಇರುವಲ್ಲಿ ಕಾರ್ಯಕ್ರಮ  ಆಯೋಜಸಲು ಮುಸಲ್ಮಾನರು ಒಪ್ಪುತ್ತಿಲ್ಲ. ಗೋವಿಂದ ಕಲ್ಯಾಣ ಮಂಟಪದಲ್ಲಿ ಸತ್ಕಾರ ಕೂಟ ಆಯೋಜಿಸುವ ಆಲೋಚನೆಯಿದೆ ಎಂದು ಶ್ರೀಗಳು ಹೇಳಿದ್ದಾರೆ. 

ಉಡುಪಿ (ಜೂ. 01):  ವಿದೇಶದಿಂದ ಕಪ್ಪು ಹಣ ಬರಲೇ ಇಲ್ಲ. ಕಪ್ಪು ಹಣವನ್ನು ಪ್ರಧಾನಿ ಮೋದಿ ತರಿಸಿಲ್ಲ. ದೇಶದ ಜನ ನಿರೀಕ್ಷೆ ಸುಳ್ಳಾಗಿದೆ ಎಂದು ಪೇಜಾವರ ಶ್ರೀಗಳು ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಈ ಹಿಂದೆ ಇಂದಿರಾ ಗಾಂಧಿಗೂ ಹೀಗೇ ಆಗಿತ್ತು. ಮುಂದಿನ ಚುನಾವಣೆಯಲ್ಲಿ ಇದರ ಪರಿಣಾಮ ಆಗಬಹುದು. ಚುನಾವಣೆಗೂ ಮೊದಲು ಮೋದಿ ಕೆಲಸ  ಮಾಡಿ ತೋರಿಸಬೇಕು ಎಂದು ಪೇಜಾವರ ಶ್ರೀ ಹೇಳಿದ್ದಾರೆ. 

ಈ ಬಾರಿಯೂ ಇಫ್ತಾರ್ ಕೂಟ ಮಾಡಬೇಕೆಂಬ ಭಾವನೆ ಇದೆ. ಮುಸಲ್ಮಾನ ನಾಯಕರು, ಪ್ರಮುಖರು ಒಪ್ಪಿದರೆ ಸತ್ಕಾರ ಕೂಟ ಮಾಡುತ್ತೇನೆ. ಈ ಬಾರಿ  ಮುಸ್ಲೀಮರು ಇಫ್ತಾರ್ ಕೂಟಕ್ಕೆ ಬಹಳ ಉತ್ಸಾಹ ತೋರಿಸುತ್ತಿಲ್ಲ.  ಕಳೆದ ಬಾರಿಯ ಇಫ್ತಾರ್ ಕೂಟ ಬಹಳ ಚರ್ಚೆಯಾಗಿತ್ತು. ಮೂರ್ತಿ ಇರುವಲ್ಲಿ ಕಾರ್ಯಕ್ರಮ ಆಯೋಜಸಲು ಮುಸಲ್ಮಾನರು ಒಪ್ಪುತ್ತಿಲ್ಲ. ಗೋವಿಂದ ಕಲ್ಯಾಣ ಮಂಟಪದಲ್ಲಿ ಸತ್ಕಾರ ಕೂಟ ಆಯೋಜಿಸುವ ಆಲೋಚನೆಯಿದೆ ಎಂದು ಶ್ರೀಗಳು ಹೇಳಿದ್ದಾರೆ. 

ಸಿಎಂ ಕುಮಾರಸ್ವಾಮಿ ಅನುಭವಿ ರಾಜಕಾರಣಿ. ರಾಜ್ಯ ಸರ್ಕಾರ ಪೂರ್ಣಾವಧಿ ಅಧಿಕಾರ ಮಾಡಲಿ ಅಂತ ಹಾರೈಸ್ತೇನೆ. ರಾಜಕೀಯ ಪಕ್ಷಗಳು ಪ್ರಜಾಪ್ರಭುತ್ಚದ ವಿಕೃತಿಯಾಗಿದೆ. ರಾಜಕಾರಣಿಗಳು ರೆಸಾರ್ಟ್, ಆಪರೇಷನ್ ನಲ್ಲಿ ತಲ್ಲೀನರಾಗಿದ್ದಾರೆ. ಯಾವುದೇ ರಾಜಕೀಯ ಪಕ್ಷಗಳು ನೈತಿಕತೆ ಹೊಂದಿಲ್ಲ.  ಗೊಂದಲ ನಿರ್ಮಾಣವಾದ್ರೆ ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ಬೇಡ. ಸರ್ವ ಪಕ್ಷ ಸರ್ಕಾರ ಜಾರಿಗೆ ಬರಬೇಕು. ಅಂತಹ ಪ್ರಯೋಗ ರಾಜ್ಯದಲ್ಲಿ ನಡೆಯಬೇಕು  ಇಂತಹ ಆದರ್ಶ ಮಂತ್ರಿ ಮಂಡಲ ರಚನೆಯಾಗಲಿ ಎಂದಿದ್ದಾರೆ. 

ಮೋದಿ  ಸರ್ಕಾರದಿಂದ ಸಾಕಷ್ಟು ಕೆಲಸ ಆಗಿದೆ. ಕೇಂದ್ರ ಸರ್ಕಾರದ ಬಗ್ಗೆ ನಿರೀಕ್ಷೆ ಬಹಳ ಇತ್ತು ನಿರೀಕ್ಷೆಯಷ್ಟು ಸಾಧನೆಗಳು ಆಗಲಿಲ್ಲ ಎಂಬ ಬೇಸರವಿದೆ. ರಾಮ ಮಂದಿರಕ್ಕಿಂತ ಮೊದಲು ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸಬೇಕು. ಗಂಗಾ ಶುದ್ಧೀಕರಣ ಸಂಪೂರ್ಣವಾಗಿ ಆಗಿಲ್ಲ ಎಂದಿದ್ದಾರೆ. 

Comments 0
Add Comment

  Related Posts

  Rahul Gandhis Special Gift To Siddaganga Shri

  video | Wednesday, April 4th, 2018

  Rahul Gandhis Special Gift To Siddaganga Shri

  video | Wednesday, April 4th, 2018

  Health Secret of Siddaganga Shri

  video | Sunday, April 1st, 2018

  Health Secret of Siddaganga Shri

  video | Sunday, April 1st, 2018

  Rahul Gandhis Special Gift To Siddaganga Shri

  video | Wednesday, April 4th, 2018
  Shrilakshmi Shri