ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜೀನಾಮೆ ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡುವ ಸುಳಿವನ್ನು ನೀಡಿದ್ದಾರೆ.
ಹೈದರಾಬಾದ್ [ಜು.07]: ಕರ್ನಾಟಕದಲ್ಲಿ ಶಾಸಕರ ರಾಜೀನಾಮೆಯಿಂದಾಗಿ ಕಾಂಗ್ರೆಸ್- ಜೆಡಿಎಸ್ ಸರ್ಕಾರ ಪತನದ ಭೀತಿ ಎದುರಿಸುತ್ತಿರುವಾಗಲೇ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚಿಸುವ ಪರೋಕ್ಷ ಸುಳಿವು ಹೊರಹಾಕಿದ್ದಾರೆ.
ಹೈದ್ರಾಬಾದ್‌ನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಸಮಾವೇಶವೊಂದನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ‘ಕರ್ನಾಟಕದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿದೆ. ಒಂದು ವೇಳೆ ತಕ್ಷಣ ಅಲ್ಲದೇ ಇದ್ದರೂ ಮುಂದೆ ಅಲ್ಲಿ ಬಿಜೆಪಿ ಸರ್ಕಾರ ರಚಿಸುವುದು ಖಚಿತ.
ಮುಂಬರುವ ವರ್ಷಗಳಲ್ಲಿ ತೆಲಂಗಾಣ, ಆಂಧ್ರ ಪ್ರದೇಶ ಹಾಗೂ ಕೇರಳದಲ್ಲೂ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಹೇಳಿದ್ದಾರೆ. ಕರ್ನಾಟದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಅಮಿತ್ ಶಾ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.
