ನವದೆಹಲಿ :  2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಭರ್ಜರಿ ಬಹುಮತಗಳೊಂದಿಗೆ ಗೆಲುವು ಸಾಧಿಸಲಿದೆ. ಮತ್ತೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು  ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 

ಅಲ್ಲದೇ ಇದೇ ವೇಳೆ ವಿಪಕ್ಷಗಳು ಬಿಜೆಪಿ ಸರ್ಕಾರದ ಅವಧಿಯಲ್ಲಿ  ಉದ್ಯೋಗ ಸೃಷ್ಟಿ ಹಾಗೂ ಆರ್ಥಿಕಾಭಿವೃದ್ಧಿಯಾಗುತ್ತಿಲ್ಲ ಎನ್ನುವ ಆರೋಪ ಮಾಡುತ್ತಿರುವುದನ್ನು ಅಲ್ಲಗಳೆದಿದ್ದಾರೆ. 

ಕೇಂದ್ರ ಸರ್ಕಾರವು ಯಾವುದೇ ರೀತಿಯ ಭೇದ ಭಾವವಿಲ್ಲದೇ ಎಲ್ಲಾ ನಾಗರಿಕರ ಜೀವನ ಮಟ್ಟವನ್ನು ಅಭಿವೃದ್ಧಿ ಮಾಡಲು ಕ್ರಮ ಕೈಗೊಳ್ಳುತ್ತಿದೆ ಎಂದು ಈ ವೇಳೆ ಹೇಳಿದ್ದಾರೆ. 

2014ರ ಲೋಕಸಭಾ ಚುನಾವಣೆಯಲ್ಲಿ ಪಡೆದ ಸ್ಥಾನಗಳಿಗಿಂತ ಈ  ಬಾರಿ ಅತ್ಯಧಿಕ ಸ್ಥಾನಗಳನ್ನು ಪಡೆಯುವುದು ಖಚಿತ ಎಂದು ಪ್ರಧಾನಿ ಭರವಸೆ ವ್ಯಕ್ತಪಡಿಸಿದ್ದಾರೆ. 

ಜನರು ನಮ್ಮ ಜೊತೆಗೆ ಇದ್ದಾರೆ ಆದ್ದರಿಂದ ನಮಗೆ ಯಾವುದೇ ರೀತಿಯಾದ ಭಯವಿಲ್ಲ ಎಂದು ಅವರು ಈ ವೇಳೆ ಹೇಳಿದ್ದಾರೆ.