ಕನ್ನಡದ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಸಹಿಸಲ್ಲ| ಸಿಎಂ ಯಡಿಯೂರಪ್ಪ ತೀಕ್ಷ್ಣ ಹೇಳಿಕೆ
ಬೆಂಗಳೂರು[ಸೆ.17]: ಕನ್ನಡ ಭಾಷೆಯ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವ ಪ್ರಯತ್ನವನ್ನೂ ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀಕ್ಷ$್ಣವಾಗಿ ಹೇಳಿದ್ದಾರೆ.
ಅತ್ತ ದೇಶಕ್ಕೊಂದೇ ಭಾಷೆ ಎಂದ ಶಾ: ಇತ್ತ ಹಿಂದಿ ದಿನ ಆಚರಣೆಗೆ ಸಿದ್ದು ವಿರೋಧ!
ಈ ಬಗ್ಗೆ ಸೋಮವಾರ ಟ್ವೀಟ್ ಮೂಲಕ ಹೇಳಿಕೆ ನೀಡಿರುವ ಅವರು, ಭಾರತೀಯ ಸಂವಿಧಾನ ಅಂಗೀಕರಿಸಿದ ಭಾಷೆಗಳಲ್ಲಿ ಯಾವುದೇ ತಾರತಮ್ಯ ಸಲ್ಲದು. ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಅಧಿಕೃತ ಭಾಷೆ ಮತ್ತು ಕನ್ನಡ ಭಾಷೆಯ ಸ್ವಾಭಿಮಾನಕ್ಕೆ ಧಕ್ಕೆ ತರುವ ಯಾವ ಪ್ರಯತ್ನವನ್ನೂ ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ಖಡಕ್ ಆಗಿ ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹಿಂದಿ ಭಾಷೆಗೆ ಸಂಬಂಧಿಸಿದಂತೆ ಒಂದು ದೇಶ-ಒಂದು ಭಾಷೆ ಬಗ್ಗೆ ನೀಡಿದ ಹೇಳಿಕೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರತಿಪಕ್ಷಗಳು ಹಾಗೂ ವಿವಿವಧ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸ್ಪಷ್ಟಹೇಳಿಕೆ ನೀಡಿದ್ದಾರೆ.