ರಾಮನಗರ ಲೋಕಸಭಾ ಉಪಚುನಾವಣೆಯಲ್ಲಿ ಗೆಲ್ಲೋದು ಜೆಡಿಎಸ್ : ಅನಿತಾ ಕುಮಾರಸ್ವಾಮಿ | ರಾಮನಗರದ ಜನತೆ ನಮ್ಮ ಪರವಾಗಿದ್ದಾರೆ. ಈ ಉಪ ಚುನಾವಣೆಯಲ್ಲಿ ಬಿಜೆಪಿ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದರು ಗೆಲುವು ನಮ್ಮದೇ : ಅನಿತಾ ಕುಮಾರಸ್ವಾಮಿ  

ಬೆಂಗಳೂರು (ಅ. 15): ಬಿಜೆಪಿಯಿಂದ ಯಾರೇ ಅಭ್ಯರ್ಥಿ ಸ್ಪರ್ಧಿಸಿದರೂ ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಅಲ್ಲಿನ ಜನತೆ ನಮ್ಮನ್ನು ಆಶೀರ್ವದಿಸಲಿದ್ದಾರೆ ಎಂದು ಮಾಜಿ ಶಾಸಕಿ ಹಾಗೂ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಮನಗರದ ಜನತೆ ನಮ್ಮ ಪರವಾಗಿದ್ದಾರೆ. ಈ ಉಪ ಚುನಾವಣೆಯಲ್ಲಿ ಬಿಜೆಪಿ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದರು ಗೆಲುವು ನಮ್ಮದೆ ಎಂದು ಹೇಳಿದರು. ಸೋಮವಾರ ಮಧ್ಯಾಹ್ನ ಜೆಡಿಎಸ್ ಅಭ್ಯರ್ಥಿಯಾಗಿ ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲಾಗುವುದು. ಬಿಜೆಪಿ ಯಾರನ್ನು ಬೇಕಾದರೂ ಅಭ್ಯರ್ಥಿಯನ್ನಾಗಿ ಸ್ಪರ್ಧೆಗೆ ಇಳಿಸಿದರು ಚಿಂತೆಯಿಲ್ಲ. ರಾಮನಗರದ ಜತೆಗೆ ಜೆಡಿಎಸ್ ಪರವಾಗಿದ್ದು, ಮತ್ತೊಮ್ಮೆ ನಮ್ಮನ್ನು ಆಶೀರ್ವದಿಸಲಿದ್ದಾರೆ ಎಂದಿದ್ದಾರೆ.

ಪಕ್ಷದ ವರಿಷ್ಠ ದೇವೇಗೌಡ ಅವರು ಸೋಮವಾರ ದೆಹಲಿಗೆ ತೆರಳುತ್ತಿರುವ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಹಾಜರಿರುವುದಿಲ್ಲ. ಆದರೆ ಪಕ್ಷದ ಎಲ್ಲಾ ಮುಖಂಡರು ಇರುತ್ತಾರೆ ಎಂದು ತಿಳಿಸಿದರು.