Asianet Suvarna News Asianet Suvarna News

‘ಲೋಕಸಭೆಯಲ್ಲಿ 22 ಸ್ಥಾನ, ಉಪ ಚುನಾವಣೆಯಲ್ಲೂ ಬಿಜೆಪಿಗೆ ಗೆಲುವು’

ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಕ್ತಾಯವಾಗಿದೆ. ಇದೇ ವೇಳೆ ಎರಡು ಕ್ಷೇತ್ರಗಳ ವಿಧಾನಸಭಾ ಉಪ ಚುನಾವಣೆ ಕಣ ರಂಗೇರಿದೆ.  ವಿವಿಧ ಪಕ್ಷಗಳ ನಾಯಕರು ತಮ್ಮದೇ ಗೆಲುವಿನ ಭರವಸೆಯಲ್ಲಿದ್ದಾರೆ. 

We will Win two Assembly By Poll Says BJP Leader BS Yeddyurappa
Author
Bengaluru, First Published May 10, 2019, 9:59 AM IST
  • Facebook
  • Twitter
  • Whatsapp

ಶಿರಾಳಕೊಪ್ಪ: ರಾಜ್ಯದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಸ್‌ ಪರಸ್ಪರ ಪ್ರತ್ಯಾರೋಪದಲ್ಲಿ ತೊಡಗಿವೆ. ಒಂದೆಡೆ ಕುಮಾರಸ್ವಾಮಿ ತಾವು 5 ವರ್ಷ ಮುಖ್ಯಮಂತ್ರಿ ಎಂದು ಹೇಳುತ್ತಾರೆ. 

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕು ಎಂದು ಅವರ ಬೆಂಬಲಿಗರು ಹೇಳುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ಗೊಂದಲ ಉಂಟಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು. 

ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇವರ ಕಿತ್ತಾಟ ನಮಗೆ ವರವಾಗಲಿದೆ. ಲೋಕಸಭೆಯಲ್ಲಿ 22 ಸ್ಥಾನ ಗೆದ್ದೇ ಗೆಲ್ಲುತ್ತೇವೆ, ಇದರಲ್ಲಿ ಅನುಮಾನವಿಲ್ಲ. ಹಾಗೆಯೇ ರಾಜ್ಯದಲ್ಲಿ ನಡೆಯುತ್ತಿರುವ ಎರಡು ಉಪಚುನಾವಣೆಯಲ್ಲಿಯೂ ಬಿಜೆಪಿ ಗೆಲುವು ನಿಶ್ಚಿತ. ನಂತರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆ ಆಗಲಿದೆ ಎಂದು ಸುಳಿವು ನೀಡಿದರು.

Follow Us:
Download App:
  • android
  • ios