ಬೆಂಗಳೂರು :  ರಾಜ್ಯದಲ್ಲಿ ಇಂದಿನಿಂದ ಹಿಂಗಾರು ಮಳೆ ಆರಂಭವಾಗಲಿದೆ.  ಅಕ್ಟೋಬರ್​ ಎರಡನೇ ವಾರವೇ ಬರಬೇಕಿದ್ದ ಹಿಂಗಾರು ಮಳೆ ತಡವಾಗಿ ಆರಂಭವಾಗುತ್ತಿದೆ. 

 ದಕ್ಷಿಣ ಒಳನಾಡಿನಲ್ಲಿ ಶುಕ್ರವಾರ ಹಾಗೂ ಶನಿವಾರ ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದು, ಬೆಂಗಳೂರು ಸೇರಿದಂತೆ ಹಲವೆಡೆ ಮೋಡ ಕವಿದ ವಾತಾವರಣವಿದೆ.   

ಕೋಲಾರ, ಚಿಕ್ಕಬಳ್ಳಾಪುರ, ಹಾಸನ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. 

 ಕೇರಳ, ಆಂಧ್ರ, ದಕ್ಷಿಣ ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶಿಸಿದ್ದು, ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿಯುವ ಸಾಧ್ಯತೆ ಇದೆ.