ಸಂಸದ ಅನಂತಕುಮಾರ ಹೆಗಡೆಯವರಿಗೆ ಅವರ ತಪ್ಪಿನ ಅರಿವಾಗಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಕಾರವಾರ (ಜ.15): ಕರ್ತವ್ಯನಿರತ ವೈದ್ಯರ ಮೇಲೆ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಹಲ್ಲೆ ನಡೆಸಿರುವ ಘಟನೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

Add Asianetnews Kannada as a Preferred SourcegooglePreferred

ಇಂದು ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಅನಂತಕುಮಾರ ಹೆಗಡೆ ವೈದ್ಯರ ಮೇಲೆ ಕೈ ಮಾಡಿದ್ದು ತಪ್ಪು, ಅವರು ದುಡುಕಬಾರದಿತ್ತು ಎಂದಿದ್ದಾರೆ.

ಸಂಸದ ಅನಂತಕುಮಾರ ಹೆಗಡೆಯವರಿಗೆ ಅವರ ತಪ್ಪಿನ ಅರಿವಾಗಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ತನ್ನ ತಾಯಿಯ ಅನಾರೋಗ್ಯಕ್ಕೆ ವೈದ್ಯರು ಸ್ಪಂದಿಸಿಲ್ಲ ಎನ್ನುವ ಕಾರಣಕ್ಕೆ ಉತ್ತರ ಕನ್ನಡ ಸಂಸದರಾಗಿರುವ ಅನಂತಕುಮಾರ ಹೆಗಡೆ, ಶಿರಸಿಯ ಟಿಎಸ್’ಎಸ್ ಆಸ್ಪತ್ರೆ ವೈದ್ಯರ ಮೇಲೆ ಆಸ್ಪತ್ರೆಗೆ ನುಗ್ಗಿ ಹಲ್ಲೆ ನಡೆಸಿದ್ದರು.

ಸಂಸದರು ವೈದ್ಯರ ಮೇಲೆ ಹಲ್ಲೆ ಮಾಡಿರುವ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಂಸದರ ಗೂಂಡಾಗಿರಿಗೆ ವೈದ್ಯಕೀಯ ವಲಯ ಹಾಗೂ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.