ಬೆಳಗಾವಿ: ಪ್ರತಿಯೊಂದಕ್ಕೂ ಕಾಂಗ್ರೆಸ್‌ನವರು ಹೇಳಿದಂತೆ ಕೇಳಬೇಕಿದೆ ಎಂಬ ನೋವಿರುವುದರಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಣ್ಣೀರಿಟ್ಟಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ. 

ಸುದ್ದಿಗಾರರೊಂದಿಗೆ ಕುಮಾರಸ್ವಾಮಿ ಕಣ್ಣೀರಿನ ಹಿನ್ನೆಲೆ ಕುರಿತು ಉತ್ತರಿಸಿದ ಅವರು, ಕುಮಾರಸ್ವಾಮಿ ಅವರ ಮನದಲ್ಲಿ ನೋವಿದೆ, ನಿರೀಕ್ಷೆಯಂತೆ ಸರ್ಕಾರ ರಚನೆ ಸಾಧ್ಯವಾಗದೇ ಕಾಂಗ್ರೆಸ್ ಜತೆ ಮೈತ್ರಿ ಸರ್ಕಾರ ರಚನೆ ಮಾಡುವಂತಾಗಿದೆ ಎಂದರು.

ಇನ್ನು ಶಾಸಕರ ಒತ್ತಾಯದ ಮೇರೆಗೆ ಚಾಲ್ತಿ ಸಾಲವನ್ನೂ ಮನ್ನಾ ಮಾಡಿದ್ದು, ಒಟ್ಟು 44 ಸಾವಿರ ಕೋಟಿ ಹೊಂದಾಣಿಕೆ ಮಾಡುವ ಜವಾಬ್ದಾರಿ ಕುಮಾರಸ್ವಾಮಿ ಮೇಲಿದೆ ಎಂದರು.