ಅಯೋಧ್ಯ ವಿಚಾರವನ್ನು ತ್ವರಿತವಾಗಿ ವಿಚಾರಣೆ ಮಾಡಬೇಕೆಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ.

ನವದೆಹಲಿ (ಮಾ.31): ಅಯೋಧ್ಯ ವಿಚಾರವನ್ನು ತ್ವರಿತವಾಗಿ ವಿಚಾರಣೆ ಮಾಡಬೇಕೆಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಯೋಧ್ಯಾ ಪ್ರಕರಣದಲ್ಲಿ ನಿಮ್ಮ ಪಾತ್ರವೇನು? ಇದರಲ್ಲಿ ನಿಮ್ಮ ಪಾತ್ರವಿದೆ ಎಂದು ನಮಗೆ ಗೊತ್ತಿರಲಿಲ್ಲ. ಈಗ ವಿಚಾರಣೆ ನಡೆಸಲು ನಮಗೆ ಸಮಯಾವಕಾಶವಿಲ್ಲ ಎಂದು ಸುಪ್ರೀಂಕೋರ್ಟ್ ಸುಬ್ರಮಣಿಯನ್ ಸ್ವಾಮಿಗೆ ಹೇಳಿದೆ.

ಅಯೋಧ್ಯಾ ಜಮೀನಿನ ಮಾಲಿಕತ್ವದ ಬಗ್ಗೆ ನನಗೆ ಸಂಬಂಧವಿಲ್ಲ. ಧಾರ್ಮಿಕ ಸ್ವಾತಂತ್ರದ ಬಗ್ಗೆ ಕಳಕಳಿಯಿದೆ ಎಂದು ಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಅಯೋಧ್ಯಾ ವಿಚಾರವು ಸೂಕ್ಷ್ಮ ಹಾಗೂ ಭಾವನಾತ್ಮಕ ವಿಚಾರವಾಗಿದ್ದು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕು ಎಂದು ಕೋರ್ಟ್ ಹೇಳಿದೆ.