ರಾಜ್ಯದಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನೊಂದಿಗೆ ಕೈ ಜೋಡಿಸಿರುವ ಜೆಡಿಎಸ್, ಸರಕಾರ ರಚಿಸುತ್ತಿದೆ. ಈ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಿದವರು ಕಾಂಗ್ರೆಸ್‌ನ ಡಿ.ಕೆ.ಶಿವಕುಮಾರ್. ಆದರೆ, ಸರಕಾರದ ಇವರಿಗೆ ಯಾವ ಖಾತೆ ನೀಡುತ್ತಾರೆಂಬ ಬಗ್ಗೆ ಸ್ಪಷ್ಟ ಮಾಹಿತಿಯಿಲ್ಲ. ಈ ಬಗ್ಗೆ ನೊಂದ ಶಿವಕುಮಾರ್ ಸುವರ್ಣ ನ್ಯೂಸ್‌ಗೆ ಹೇಳಿದ್ದಿಷ್ಟು....
ಬೆಂಗಳೂರು: ರಾಜ್ಯದಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನೊಂದಿಗೆ ಕೈ ಜೋಡಿಸಿರುವ ಜೆಡಿಎಸ್, ಸರಕಾರ ರಚಿಸುತ್ತಿದೆ. ಈ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸಿದವರು ಕಾಂಗ್ರೆಸ್‌ನ ಡಿ.ಕೆ.ಶಿವಕುಮಾರ್. ಆದರೆ, ಸರಕಾರದ ಇವರಿಗೆ ಯಾವ ಖಾತೆ ನೀಡುತ್ತಾರೆಂಬ ಬಗ್ಗೆ ಸ್ಪಷ್ಟ ಮಾಹಿತಿಯಿಲ್ಲ. ಈ ಬಗ್ಗೆ ನೊಂದ ಶಿವಕುಮಾರ್ ಸುವರ್ಣ ನ್ಯೂಸ್‌ಗೆ ಹೇಳಿದ್ದಿಷ್ಟು..
- ನನಗೆ ಯಾವ ಖಾತೆ ಕೊಡ್ತಾರೆ ಅನ್ನೋದನ್ನಹೇಗೆ ಹೇಳಲಿ? ಎಲ್ಲವಕ್ಕೂ ಮುಹೂರ್ತ, ಶುಭಕಾಲ, ರಾಹುಕಾಲ, ಗುಳಿಗ ಕಾಲ ಬರಬೇಕು. ನಾನು ಎಲ್ಲೂ ಸೈಲೆಂಟಾಗಿಲ್ಲ. ಸನ್ಯಾಸಿಯೂ ಅಲ್ಲ, ಚೆಂಡು ಆಡಲ್ಲ, ನಾನು ಚೆಸ್ ಗೇಮ್ ಆಡುವವನು.
- ಹಣೆ ಬರಹದ ಮುಂದೆ ಯಾರೂ ಏನೂ ಮಾಡಿದರೂ ನಡೆಯೋಲ್ಲ. ಎಲ್ಲವಕ್ಕೂ ಹಣೆಯಲ್ಲಿ ಬರೆದಿರಬೇಕು. ನಾನು ಸರ್ಕಾರದ ಭಾಗವಾಗಿ ಇರ್ತಿನೋ ಇಲ್ವೋ ಗೊತ್ತಿಲ್ಲ. ನನ್ನ ಕೆಲಸ ನಾನು ನಿಷ್ಠೆಯಿಂದ ಮಾಡಿದ್ದೇನೆ. ಸದ್ಯ ನಾನು ಶಾಸಕ. ಶಾಸಕನಾಗಿ ಇರಲು ಹೇಳಿದ್ದಾರೆ. ನಾನು ನನ್ನ ಕ್ಷೇತ್ರಕ್ಕೆ ತೆರಳಿ ಜನರನ್ನ ಮಾತಾಡಿಸಬೇಕಿದೆ. ಶಾಸಕರನ್ನ ಒಟ್ಟಿಗೆ ಹಿಡಿದಿಟ್ಟುಕೊಳ್ಳುವ ಕೆಲಸವಿದೆ.
- ರೈತರ ಸಾಲಮನ್ನಾ ವಿಚಾರವಾಗಿ ಕುಮಾರಸ್ವಾಮಿ ಈಗಾಗಲೇ ಹೇಳಿದ್ದಾರೆ. ಸದ್ಯದ ಆರ್ಥಿಕ ಪರಿಸ್ಥಿತಿಯನ್ನ ನೋಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ.
- ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ, ಎನ್ನುವ ಮೂಲಕ ಡಿಸಿಎಂ ಹುದ್ದೆ ತಪ್ಪಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.
