ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಪುನರಾಯ್ಕೆಯಾದ ಬೆನ್ನಲ್ಲೇ ಬಿಜೆಪಿ ನೇತೃತ್ವದ ಎನ್‌ಡಿಎಯೊಳಗೆ ಸಚಿವ ಸಂಪುಟದ ಲೆಕ್ಕಾಚಾರ ಆರಂಭವಾಗಿದೆ. ಯಾರು ಸಂಪುಟ ಸೇರಬಹುದು, ಯಾರಿಗೆ ಬಡ್ತಿ ಸಿಗಬಹುದು, ಯಾರಿಗೆ ಪ್ರಧಾನಿ ನರೇಂದ್ರ ಮೋದಿ ಕೊಕ್‌ ನೀಡಬಹುದು ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ. 

ಆದರೆ ಯಾರು ಮಂತ್ರಿಯಾಗುತ್ತಾರೆ ಎಂಬುದು ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರನ್ನು ಹೊರತುಪಡಿಸಿ ಬೇರಾರಿಗೂ ಗೊತ್ತಿರುವ ಸಾಧ್ಯತೆ ಕಡಿಮೆ.

ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ಪಕ್ಷಾಧ್ಯಕ್ಷ ಅಮಿತ್‌ ಶಾ ಅವರು ಸಂಪುಟ ಸೇರುವುದು ಬಹುತೇಕ ಖಚಿತವಾಗಿದೆ. ಅವರಿಗೆ ಪ್ರಧಾನಿ ನಂತರದ ಸ್ಥಾನ ಎಂದೇ ಬಿಂಬಿತವಾಗುವ ಗೃಹ ಖಾತೆ ಸಿಗುವ ಸಾಧ್ಯತೆ ಇದೆ. ವಿತ್ತ, ರಕ್ಷಣೆ ಅಥವಾ ವಿದೇಶಾಂಗ ಖಾತೆ ಸಿಗುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ.