ಕೊಪ್ಪಳ (ಸೆ.26): ಕಾರ್ಖಾನೆಯಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕರವೇ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗಿಣಗೇರಿಯಲ್ಲಿರುವ ಕಾರ್ಖಾನೆಯಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಕರವೇ ಯುವಸೇನಾ ಕಾರ್ಯಕರ್ತರು ಕಾರ್ಖಾನೆಯ ಗೇಟ್ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಏಕಾಏಕಿ ಇವರ ಮೇಲೆ ದಾಳಿ ನಡೆದಿದೆ.

ದಾಳಿಯಲ್ಲಿ ಕರವೇ ಯುವಸೇನೆ ಉತ್ತರ ಕರ್ನಾಟಕ ಅಧ್ಯಕ್ಷ ವಿಜಯ್ ಕುಮಾರ್ ಹಾಗೂ ಕಾರ್ಯಕರ್ತ ಬಸವರಾಜ್ ಅವರ ತಲೆಗೆ ಪೆಟ್ಟು ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೋಲಿಸರು ಲಘು ಲಾಟಿ ಪ್ರಯೋಗಿಸಿದರು. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

-ಸಾಂದರ್ಭಿಕ ಚಿತ್ರ