ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಬಿಜೆಪಿಯವರು ವಿರೋಧಿಸಿದರು. ಪಾರ್ಕ್ಗಳನ್ನು ವಶಪಡಿಸಿಕೊಳ್ತಿದ್ದಾರೆ ಎಂದು ಹೇಳಿದರು. ಇಂದಿರಾ ಕ್ಯಾಂಟೀನ್ ಆರಂಭಕ್ಕೆ ಸಾಕಷ್ಟು ಅಡ್ಡಿಪಡಿಸಿದರು. ಆದರೆ ಯಾವುದೇ ಪಾರ್ಕ್ ಜಾಗವನ್ನು ಸ್ವಾಧೀನಪಡಿಸಿಕೊಂಡಿಲ್ಲ. ಬಿಜೆಪಿಯವರು ಬಡವರ ವಿರೋಧಿಗಳು ಎಂದು ಕಾಂಗ್ರೆಸ್ ಸಾರ್ಥಕ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು (ಆ.16): ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಬಿಜೆಪಿಯವರು ವಿರೋಧಿಸಿದರು. ಪಾರ್ಕ್ಗಳನ್ನು ವಶಪಡಿಸಿಕೊಳ್ತಿದ್ದಾರೆ ಎಂದು ಹೇಳಿದರು. ಇಂದಿರಾ ಕ್ಯಾಂಟೀನ್ ಆರಂಭಕ್ಕೆ ಸಾಕಷ್ಟು ಅಡ್ಡಿಪಡಿಸಿದರು. ಆದರೆ ಯಾವುದೇ ಪಾರ್ಕ್ ಜಾಗವನ್ನು ಸ್ವಾಧೀನಪಡಿಸಿಕೊಂಡಿಲ್ಲ. ಬಿಜೆಪಿಯವರು ಬಡವರ ವಿರೋಧಿಗಳು ಎಂದು ಕಾಂಗ್ರೆಸ್ ಸಾರ್ಥಕ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ಬಡವರು, ದಲಿತರ ಪರವಾದ ಪಕ್ಷ. ಇಂದಿರಾ ಗಾಂಧಿ ಬಡವರ ಪರವಾಗಿ ಕೆಲಸ ಮಾಡಿದ್ದಾರೆ. ಇಂದು ಬಡವರು ಇಂದಿರಾ ಗಾಂಧಿ ಫೋಟೋ ಇಟ್ಟು ಪೂಜಿಸುತ್ತಿದ್ದಾರೆ. ಮೋದಿ ಸರ್ಕಾರ ಮಾತಿನಲ್ಲೇ ಮಂಟಪ ಕಟ್ಟುತ್ತಿದ್ದಾರೆ. ನೋಟ್ ಬ್ಯಾನ್ ಮಾಡಿ ಬಡವರನ್ನು ಸಂಕಷ್ಟಕ್ಕೆ ತಳ್ಳಿದ್ದಾರೆ ಎಂದು ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಮ್ಮ ಸರ್ಕಾರವನ್ನು ಬಿಜೆಪಿ ಭ್ರಷ್ಟ ಸರ್ಕಾರ ಎಂದು ಆರೋಪಿಸಿದೆ. ಭ್ರಷ್ಟಾಚಾರ ನಡೆಸಿದ್ದು ಹಿಂದಿನ ಬಿಜೆಪಿ ಸರ್ಕಾರ. ಯಡಿಯೂರಪ್ಪ, ಜನಾರ್ದನ ರೆಡ್ಡಿ ಜೈಲಿಗೆ ಹೋಗಿ ಬಂದರು. ನಮ್ಮದು ಭ್ರಷ್ಟಾಚಾರ ರಹಿತ ಸರ್ಕಾರ ಎಂದು ಸಿಎಂ ಹೇಳಿದ್ದಾರೆ.
ನನಗೆ ಲೆಕ್ಕ ಕೇಳಲು ಅಮಿತ್ ಶಾ ಯಾರು? ಕೇಂದ್ರದಿಂದ ರಾಜ್ಯಕ್ಕೆ ಲಕ್ಷಾಂತರ ಹಣ ನೀಡಿದ್ದೇವೆ ಎನ್ನುತ್ತಾರೆ. ಅಮಿತ್ ಶಾ ಅವರಿಗೆ ಆರ್ಥಿಕ ವ್ಯವಹಾರದ ಜ್ಞಾನವಿಲ್ಲ. ಅಮಿತ್ ಶಾ ಅವರಿಗೆ ಕ್ರಿಮಿನಲ್ ತಂತ್ರಗಾರಿಕೆ ಮಾತ್ರ ಬರುತ್ತೆ 14ನೇ ಹಣಕಾಸು ಆಯೋಗ ರಾಜ್ಯಕ್ಕೆ ನೀಡುವ ಅನುದಾನದಲ್ಲಿ 10 ಸಾವಿರ ಕೋಟಿ ಹಣವನ್ನು ಕಡಿತಗೊಳಿಸಲಾಗಿದೆ. ನಮ್ಮ ಸರ್ಕಾರದ ಬಗ್ಗೆ ಮಾತಾಡುವ ನೈತಿಕತೆ ಬಿಜೆಪಿಗೆ ಇಲ್ಲ ಸಿಎಂ ವಾಗ್ದಾಳಿ ನಡೆಸಿದ್ದಾರೆ.
