ಅಪ್ಪ – ಮಗನಲ್ಲಿಯೇ ಶುರುವಾಗಿದೆ ಟಿಕೆಟ್ ಗೊಂದಲ..? ಯಾರಾಗಲಿದ್ದಾರೆ ಅಭ್ಯರ್ಥಿ..?

First Published 7, Mar 2018, 12:47 PM IST
Who Is BJP Candidate From Hosakote
Highlights

ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಬಣದಲ್ಲಿರುವ ಎಂ.ಟಿ.ಬಿ. ನಾಗರಾಜ್ ಮತ್ತೆ ಕಣಕ್ಕಿಳಿಯುವುದು ಖಚಿತ. ಬಿಜೆಪಿಯಿಂದ ಮಾಜಿ ಸಚಿವ ಬಿ.ಎನ್. ಬಚ್ಚೇಗೌಡ ಮತ್ತು ಅವರ ಪುತ್ರ ಶರತ್ ಹೆಸರುಗಳು ಮುಂಚೂಣಿಯಲ್ಲಿವೆ.

ಹೊಸಕೋಟೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಬಣದಲ್ಲಿರುವ ಎಂ.ಟಿ.ಬಿ. ನಾಗರಾಜ್ ಮತ್ತೆ ಕಣಕ್ಕಿಳಿಯುವುದು ಖಚಿತ. ಬಿಜೆಪಿಯಿಂದ ಮಾಜಿ ಸಚಿವ ಬಿ.ಎನ್. ಬಚ್ಚೇಗೌಡ ಮತ್ತು ಅವರ ಪುತ್ರ ಶರತ್ ಹೆಸರುಗಳು ಮುಂಚೂಣಿಯಲ್ಲಿವೆ.

ಇವರಿಬ್ಬರಲ್ಲೇ ಒಬ್ಬರು ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗಿದೆ. ಕಣಕ್ಕಿಳಿಯಬೇಕೊ ಅಥವಾ ಬೇಡವೊ ಎಂಬುದರ ಬಗ್ಗೆ ಬಚ್ಚೇಗೌಡರು ಇನ್ನೂ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ವಿದೇಶದಲ್ಲಿ ವ್ಯಾಸಂಗ ಮಾಡಿ ವಾಪಸಾಗಿರುವ ಪುತ್ರ ಶರತ್ ಅವರೇ ಕ್ಷೇತ್ರದಲ್ಲಿನ ರಾಜಕೀಯ ಬೆಳವಣಿಗೆಗಳನ್ನು ನೋಡಿಕೊಳ್ಳುತ್ತಿದ್ದಾರೆ.

ನಿಮ್ಮಿಬ್ಬರಲ್ಲಿ ಯಾರು ಸ್ಪರ್ಧಿಸಬೇಕು ಎಂಬುದನ್ನು ನಿರ್ಧರಿಸಿ ತಿಳಿಸಿ ಎಂಬ ಮಾತನ್ನು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಈಗಾಗಲೇ ಹೇಳಿದ್ದಾರಂತೆ. ಜೆಡಿಎಸ್‌ನಿಂದ ಯಾರು ಅಭ್ಯರ್ಥಿ ಎಂಬುದು ಇನ್ನೂ ಅಂತಿಮವಾಗಿಲ್ಲ. ಶ್ರೀಧರ್ ಮತ್ತು ಕೃಷ್ಣಮೂರ್ತಿ ನಡುವೆ ಟಿಕೆಟ್‌ಗಾಗಿ ಸ್ಪರ್ಧೆ ಏರ್ಪಟ್ಟಿದೆ. ಶ್ರೀಧರ್ ಕಳೆದ ಬಾರಿ ಸ್ಪರ್ಧಿಸಿ ಠೇವಣಿ ಕಳೆದುಕೊಂಡಿದ್ದರು.

loader