ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಮುಖ್ಯಮಂತ್ರಿ ಅಭ್ಯರ್ಥಿಯನ್ನುಏ.15ರಂದು ಘೋಷಣೆ ಮಾಡಲಾಗುವುದು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಬೆಳಗಾವಿ ವಿಭಾಗದ ಉಸ್ತುವಾರಿ ಮಾಣಿಕಂ ಠಾಗೂರ್‌ ತಿಳಿಸಿದ್ದಾರೆ.

ಬೆಳಗಾವಿ: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಮುಖ್ಯಮಂತ್ರಿ ಅಭ್ಯರ್ಥಿಯನ್ನುಏ.15ರಂದು ಘೋಷಣೆ ಮಾಡಲಾಗುವುದು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಬೆಳಗಾವಿ ವಿಭಾಗದ ಉಸ್ತುವಾರಿ ಮಾಣಿಕಂ ಠಾಗೂರ್‌ ತಿಳಿಸಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್‌ 11, 12ರಂದು ಬೆಂಗಳೂರಲ್ಲಿ ಕಾಂಗ್ರೆಸ್‌ನ ಚುನಾವಣಾ ಉಸ್ತುವಾರಿ ಉನ್ನತ ಸಮಿತಿ ಮತ್ತು ಎಐಸಿಸಿ ಉನ್ನತ ಪದಾಧಿಕಾರಿಗಳ ಸಭೆ ನಡೆಯಲಿದ್ದು ಅಂದು ಸಿಎಂ ಅಭ್ಯರ್ಥಿಯನ್ನು ತೀರ್ಮಾನಿಸಲಾಗುತ್ತದೆ ಎಂದರು. ಆ ಬಳಿಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗುತ್ತದೆ. ಏ.15ರಂದು ಸಿಎಂ ಅಭ್ಯರ್ಥಿಯನ್ನು ಪ್ರಕಟಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಕಾಂಗ್ರೆಸ್‌ ಹೇಳಿದ್ದರೂ, ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿಲ್ಲ. ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಅವರನ್ನು ಪ್ರಚಾರ ಸಮಿತಿ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ. ಚುನಾವಣೆಗೂ ಮುನ್ನ ಸಿಎಂ ಅಭ್ಯರ್ಥಿಯನ್ನು ಕಾಂಗ್ರೆಸ್‌ ಅಧಿಕೃತವಾಗಿ ಘೋಷಣೆ ಮಾಡುತ್ತಿರುವುದು ಕರ್ನಾಟಕದಲ್ಲಿ ಪ್ರಾಯಶಃ ಇದೇ ಮೊದಲು ಎನ್ನಲಾಗುತ್ತಿದೆ.