ಚಾಮರಾಜನಗರ ಜಿಲ್ಲೆಯ ಉಪ್ಪಾರ ಸಮುದಾಯಕ್ಕೆ ಸೇರಿದ ಬೆಂಬಲಿಗರು ಮಂಗಳವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಗೃಹಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ್ದರು.
ಬೆಂಗಳೂರು(ಜ.10): ಸಹಕಾರ ಮತ್ತು ಸಕ್ಕರೆ ಸಚಿವ ಹೆಚ್.ಎಸ್. ಮಹದೇವಪ್ರಸಾದ್ ನಿಧನದಿಂದ ತೆರವಾದ ಸ್ಥಾನಕ್ಕೆ ಚಾಮರಾಜನಗರದ ಶಾಸಕರನ್ನೇ ಸಚಿವರನ್ನಾಗಿ ಮಾಡುವಂತೆ ಲಾಬಿ ಶುರುವಾಗಿದೆ. ಚಾಮರಾಜನಗರದಿಂದ ಬಂದಿದ್ದ ಶಾಸಕ ಪುಟ್ಟರಂಗಶೆಟ್ಟಿ ಬೆಂಬಲಿಗರು ತೆರವಾದ ಸ್ಥಾನವನ್ನು ಚಾಮರಾಜನಗರದವರಿಗೆ ನೀಡುವಂತೆ ಆಗ್ರಹಿಸಿದರು.
ಚಾಮರಾಜನಗರ ಜಿಲ್ಲೆಯ ಉಪ್ಪಾರ ಸಮುದಾಯಕ್ಕೆ ಸೇರಿದ ಬೆಂಬಲಿಗರು ಮಂಗಳವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಗೃಹಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ್ದರು. 300ಕ್ಕೂ ಹೆಚ್ಚು ಬೆಂಬಲಿಗರು ಪುಟ್ಟರಂಶೆಟ್ಟಿಯವರನ್ನು ಸಚಿವರನ್ನಾಗಿ ಮಾಡಬೇಕೆಂದು ಘೋಷಣೆ ಕೂಗಿದರು. ಚಾಮರಾಜನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಯ್ಯದ್ ರಫಿ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಿದ್ದು ಮೊದಲು ಅಲ್ಲಿನ ಉಪಚುನಾವಣೆ ಗೆಲ್ಲುವುದನ್ನು ಖಾತರಿಪಡಿಸಿಕೊಳ್ಳಿ ಬಳಿಕವಷ್ಟೇ ಸಚಿವ ಸ್ಥಾನದ ಕುರಿತು ಮಾತನಾಡೋಣ.ಉಪಚುನಾವಣೆ ಮುಂದಿಟ್ಟುಕೊಂಡು ಈ ರೀತಿ ಒತ್ತಡ ತಂದರೆ ಹೇಗೆ. ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಲು ಶ್ರಮಿಸಿ ಎಂದು ಸಿಎಂ ಹೇಳಿರುವುದಾಗಿ ತಿಳಿದುಬಂದಿದೆ.
