ಎಚ್’ಡಿ ಕುಮಾರಸ್ವಾಮಿ ಅವರ ಎದುರಾಳಿ ಯಾರು..?

First Published 27, Feb 2018, 12:10 PM IST
Who Is Opposite Candidate Of HD Kumaraswamy
Highlights

ರಾಜ್ಯಕ್ಕೆ ಮೂವರು ಮುಖ್ಯಮಂತ್ರಿಗಳನ್ನು ಕೊಡುಗೆ ನೀಡಿದ ಕ್ಷೇತ್ರ. ಹಾಲಿ ಶಾಸಕರಾಗಿರುವ ಎಚ್.ಡಿ. ಕುಮಾರಸ್ವಾಮಿ ಸತತ ಮೂರು ಬಾರಿ ಇಲ್ಲಿಂದ ಗೆದ್ದಿದ್ದಾರೆ. ಕಳೆದ ಬಾರಿ ಕಾಂಗ್ರೆಸ್ ಅಭ್ಯರ್ಥಿ ಮರಿದೇವರು ಅವರು ‘ದಳಪತಿ’ಯ ಗೆಲುವಿನ ನಾಗಾಲೋಟಕ್ಕೆ ಕಡಿವಾಣ ಹಾಕಲು ಯತ್ನಿಸಿದ್ದರು.

ರಾಮನಗರ : ರಾಜ್ಯಕ್ಕೆ ಮೂವರು ಮುಖ್ಯಮಂತ್ರಿಗಳನ್ನು ಕೊಡುಗೆ ನೀಡಿದ ಕ್ಷೇತ್ರ. ಹಾಲಿ ಶಾಸಕರಾಗಿರುವ ಎಚ್.ಡಿ. ಕುಮಾರಸ್ವಾಮಿ ಸತತ ಮೂರು ಬಾರಿ ಇಲ್ಲಿಂದ ಗೆದ್ದಿದ್ದಾರೆ. ಕಳೆದ ಬಾರಿ ಕಾಂಗ್ರೆಸ್ ಅಭ್ಯರ್ಥಿ ಮರಿದೇವರು ಅವರು ‘ದಳಪತಿ’ಯ ಗೆಲುವಿನ ನಾಗಾಲೋಟಕ್ಕೆ ಕಡಿವಾಣ ಹಾಕಲು ಯತ್ನಿಸಿದ್ದರು.

ಆದರೆ 30 ಸಾವಿರ ಮತಗಳ ಅಂತರದಿಂದ ಕುಮಾರಸ್ವಾಮಿ ಗೆಲುವು ಸಾಧಿಸಿದ್ದರು. ಮರಿದೇವರು ಇಹಲೋಕ ತ್ಯಜಿಸಿದ್ದಾರೆ. ಕುಮಾರಸ್ವಾಮಿ ಅವರಿಗೆ ಸವಾಲು ಒಡ್ಡುವಂತಹ  ಸಮರ್ಥ ಅಭ್ಯರ್ಥಿಗೆ ಕಾಂಗ್ರೆಸ್ ಹುಡುಕಾಟ ನಡೆಸಿದೆ.

ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಇಕ್ಬಾಲ್ ಹುಸೇನ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಲ್. ಚಂದ್ರಶೇಖರ್ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಸಂಸದ ಡಿ.ಕೆ. ಸುರೇಶ್ ಹೆಸರೂ ಓಡಾಡುತ್ತಿದೆ. ಬಿಜೆಪಿಯಿಂದ ಜಗದೀಶ್ ಗೌಡ ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ. ಆ ಪಕ್ಷದ ನಾಯಕರು ಮರಿದೇವರು ಪತ್ನಿಯನ್ನು ಪಕ್ಷಕ್ಕೆ ಸೆಳೆದು ಕಣಕ್ಕಿಳಿಸುವ ಪ್ರಯತ್ನದಲ್ಲಿದ್ದಾರೆ.

loader