ಸಾಗರ – ಸೊರಬದಲ್ಲಿ ಬಿಜೆಪಿ ಅಭ್ಯರ್ಥಿ ಯಾರು..? : ಯಾರಿಗೆ ಕಾದಿದೆ ನಿರಾಶೆ

First Published 26, Feb 2018, 11:36 AM IST
Who Is the BJP Cadidate  Of Sagar
Highlights

5 ದಿನಗಳಿಂದ ಜಿಲ್ಲಾ ಬಿಜೆಪಿಯಲ್ಲಿ ನಡೆಯುತ್ತಿರುವ ಗೊಂದಲಕಾರಿ ಬೆಳವಣಿಗೆ ಈಗ ಮತ್ತೊಂದು ರೂಪ ಪಡೆದಿದೆ. ಮುಂದಿನ ಚುನಾವಣೆಯಲ್ಲಿ ಸಾಗರ ಕ್ಷೇತ್ರದಿಂದ ಹರತಾಳು ಹಾಲಪ್ಪ ಹಾಗೂ ಸೊರಬದಿಂದ ಕುಮಾರ್ ಬಂಗಾರಪ್ಪ ಅವರು ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.

ಶಿವಮೊಗ್ಗ: 15 ದಿನಗಳಿಂದ ಜಿಲ್ಲಾ ಬಿಜೆಪಿಯಲ್ಲಿ ನಡೆಯುತ್ತಿರುವ ಗೊಂದಲಕಾರಿ ಬೆಳವಣಿಗೆ ಈಗ ಮತ್ತೊಂದು ರೂಪ ಪಡೆದಿದೆ. ಮುಂದಿನ ಚುನಾವಣೆಯಲ್ಲಿ ಸಾಗರ ಕ್ಷೇತ್ರದಿಂದ ಹರತಾಳು ಹಾಲಪ್ಪ ಹಾಗೂ ಸೊರಬದಿಂದ ಕುಮಾರ್ ಬಂಗಾರಪ್ಪ ಅವರು ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಈ ಮೂಲಕ ಗೋಪಾಲ ಕೃಷ್ಣ ಬೇಳೂರು ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ವಿರಳ ಎಂಬಂತಾಗಿದೆ. ಈ ಬಗ್ಗೆ ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರೇ ಪರೋಕ್ಷ ವಾಗಿ ಮುನ್ಸೂಚನೆ ನೀಡಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಹರತಾಳು ಹಾಲಪ್ಪ ಅವರಿಗೆ ಸಾಗರ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬ ಕನಸಿರುವುದು ನಿಜ. ಹಾಗಾಗಿ, ಬೇಳೂರು ಅವರಿಗೆ ಸೂಕ್ತ ಸ್ಥಾನಮಾನ ನೀಡುವ ಬಗ್ಗೆ ತೀರ್ಮಾನಿಸುತ್ತೇವೆ. ಸೊರಬದಲ್ಲಿ ಕುಮಾರ್ ಬಂಗಾರಪ್ಪ ಸ್ಪರ್ಧಿಸಲೆಂಬ ಅಪೇಕ್ಷೆಯಿಂದ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಯಾವ ಕಾರಣಕ್ಕೂ ಬಿಜೆಪಿ ಬಿಡಲ್ಲ- ಬೇಳೂರು: ಸಾಗರದಲ್ಲಿ ನಾನೂ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಟಿಕೆಟ್ ನೀಡುವುದಿಲ್ಲ ಎಂದು ಪಕ್ಷದಿಂದ ಅಧಿಕೃತವಾಗಿ ತಿಳಿಸಿದರೆ ಆ ತೀರ್ಮಾನಕ್ಕೆ ನಾನು ಬದ್ಧ. ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.

loader